ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. 4 ಲಕ್ಷ ಹಣದೊಂದಿಗೆ ಅಧಿಕಾರಿ, ಅವರ ಪಿಎ ವಶಕ್ಕೆ ಪಡೆದಿದ್ದಾರೆ
ಸೋಮವಾರ ಮಧ್ಯಾಹ್ನ ಮಲ್ಲೇಶ್ವರದಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿಯಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದೆ.
ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು. ಈ ದೂರಿನ ಅನ್ವಯವೇ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಪ್ರಾಥಮಿಕವಾಗಿ ಲಭ್ಯವಾಗಿದೆ. ಇದನ್ನು ಓದಿ – ಬೆಂಗಳೂರಿನ ಮಹಾದೇವಪುರದಲ್ಲಿ ರಾಜಕಾಲುವೆ ಒತ್ತುವರಿ – 8 ಕಡೆ ಜೆಸಿಬಿ ಆಪರೇಷನ್ ಆರಂಭ
ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಖಾತೆ ಬದಲಾವಣೆ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಸೋಮವಾರ ಲಂಚ ನೀಡಲು ಕಚೇರಿಗೆ ಆಗಮಿಸುವ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ