ರಾಮನಗರ ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ

Team Newsnap
1 Min Read

ರಾಮನಗರ : ತಡರಾತ್ರಿ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಮಂಡ್ಯದಿಂದ ಬೆಂಗಳೂರು ಕಡೆಗೆ ಮರದ ಹೊಟ್ಟು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚೆಕ್‌ ಪೋಸ್ಟ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ,ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಪಾರಾಗಿದ್ದಾರೆ.

ಇದನ್ನು ಓದಿ – ಸುಮಲತಾ ಅಂಬರೀಶ್‌ ಬಿಜೆಪಿ ಗೆ ಸೇರ್ಪಡೆ

ಈ ಅಪಘಾತ , ಚಾಲಕ ಮದ್ಯಪಾನ ಮಾಡಿ ಲಾರಿ ಚಲಾಯಿಸಿದ್ದರಿಂದ ಸಂಭವಿಸಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ,ಲಾರಿ ಚಾಲಕನನ್ನು ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a comment