ಲವ್ ದೋಖಾ ಆರೋಪ: ನಟಿ ದಿವ್ಯಾ ಪತಿ ಅಮ್ಜಾದ್ ಖಾನ್ ಬಂಧನ

Team Newsnap
1 Min Read

ಕನ್ನಡ ಕಿರುತೆರೆ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಅವರನ್ನು ತಮಿಳು ನಾಡು ಪೊಲೀಸರು ಬಂಧಿಸಿದ್ದಾರೆ .

ತನಗೆ ಸುಳ್ಳು ಹೇಳಿ ಮದುವೆ ಆಗಿದ್ದಾನೆ, ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಹಾಗೂ ಲವ್ ಜಿಹಾದ್ ಆರೋಪವನ್ನೂ ಪತಿಯ ಮೇಲೆ ಹೊರೆಸಿ, ದಿವ್ಯಾ ದೂರು ನೀಡಿದ್ದರು.

ಈ ದೂರಿನಲ್ಲಿ ಪತಿಯು ತಮ್ಮ ಮೇಲೆ ಮಾಡಿದ ಹಲ್ಲೆಯಿಂದಾಗಿ ಗರ್ಭಪಾತದ ಭಯವೂ ಕಾಡುತ್ತಿದೆ ಎಂದು ಉಲ್ಲೇಖಿಸಿದ್ದರು. ಈ ದೂರಿನ ಅನ್ವಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮೊನ್ನೆಯಷ್ಟೇ ಆಸ್ಪತ್ರೆಯಿಂದ ಸೀದಾ ಪತಿ ಅಮ್ಜಾದ್ ಖಾನ್ ಮನೆಗೆ ಹೋಗಿರುವ ದಿವ್ಯಾ ಶ್ರೀಧರ್, ತನಗೆ ಈ ರೀತಿ ಯಾಕೆ ಮೋಸ ಮಾಡಿದೆ ಎಂದು ಪ್ರಶ್ನಿಸಿದ್ದರು. ಪತಿ ಜೊತೆ ಜೋರು ಮಾತಿಗೆ ನಿಂತಿದ್ದರು. ದಿವ್ಯಾ ಶ್ರೀಧರ್ ಕೂಗಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ಅಮ್ಜಾದ್ ಖಾನ್ ಅದನ್ನು ಮಾಧ್ಯಮಗಳಿಗೆ ನೀಡಿದ್ದರು. ಗ್ಯಾನವಾಪಿ ಪ್ರಕರಣ : ‘ಕಾರ್ಬನ್ ಡೇಟ್​’ ಪರೀಕ್ಷೆಗೆ ವಾರಣಾಸಿ ಕೋರ್ಟ್ ನಕಾರ

ಮಾಧ್ಯಮಗಳ ಜೊತೆ ಹಂಚಿಕೊಂಡಿರುವ ವಿಡಿಯೋದಲ್ಲಿ ‘ನೀನು ಯಾಕೆ ನನಗೆ ಮೋಸ ಮಾಡಿ ಮದುವೆಯಾದೆ. ಸುಳ್ಳು ಯಾಕೆ ಹೇಳಬೇಕಿತ್ತು’ ಎಂದು ದಿವ್ಯಾ ಕೇಳುತ್ತಾರೆ. ‘ಮೋಸ ಮಾಡಿದ್ದು ನಾನಲ್ಲ, ನೀನು. ನೀನೇ ನನ್ನನ್ನು ಪ್ರೀತಿಸಿ ಮದುವೆ ಆಗಿದ್ದು. ನಾನು ಮೋಸ ಮಾಡಿಲ್ಲ. ನೀನೇ ನನಗೆ ಮೋಸ ಮಾಡುತ್ತಿರುವದು’ ಎಂದು ಅಮ್ಜಾದ್ ಖಾನ್ ಹೇಳುತ್ತಾರೆ. ಇಬ್ಬರೂ ಒಬ್ಬರಿಗೊಬ್ಬರು ಮೋಸದ ಆರೋಪ ಮಾಡುತ್ತಾರೆ. ಈ ವಿಡಿಯೋ ವೈರಲ್ ಆಗಿತ್ತು.

ನಟಿ ದಿವ್ಯಾ ನಟಿ ದಿವ್ಯಾ

Share This Article
Leave a comment