ಸಾಮಾಜಿಕ ಜಾಲತಾಣದ ಮೂಲಕವೇ ಪರಿಚಯವಾದ ಯುವಕನ ಜೊತೆ ಪ್ರೀತಿಯ ಬಲೆಗೆ ಬಿದ್ದ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಲವ್ ಫೇಲ್ಯೂರ್ ಎಂದು ಡೆತ್ ಬರೆದಿಟ್ಟು ಪವಿತ್ರಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇದನ್ನು ಓದಿ –ಜಪಾನ್ : ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಜೀವ ಕಳೆದುಕೊಂಡಿದ್ದಾಳೆ. ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಡೆತ್ನೋಟ್ ಕೂಡ ಬರೆದಿಟ್ಟಿದ್ದಾಳೆ.
ಇನ್ಟಾಗ್ರಾಂ ನಲ್ಲಿ ಪರಿಚಯವಾದ ಹುಡಗನ ಜೊತೆ ಲವ್ ಮಾಡಿದೆ, ಈಗ ಲವ್ ಫೇಲ್ಯೂರ್ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ.
ಚಿಂತಾಮಣಿ ಗ್ರಾಮಾಂತರ ಪೊಲೀಸರು ಪ್ರಕರಣ ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು