crime

ಇನ್​ಸ್ಟಾಗ್ರಾಂನಲ್ಲಿ ಲವ್​: ಪ್ರೀತಿಗೆ ಮೋಸ – ಆತ್ಮಹತ್ಯೆ ಮಾಡಿಕೊಂಡ ಚಿಂತಾಮಣಿ ವಿದ್ಯಾರ್ಥಿನಿ

ಸಾಮಾಜಿಕ ಜಾಲತಾಣದ ಮೂಲಕವೇ ಪರಿಚಯವಾದ ಯುವಕನ ಜೊತೆ ಪ್ರೀತಿಯ ಬಲೆಗೆ ಬಿದ್ದ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಲವ್​ ಫೇಲ್ಯೂರ್​ ಎಂದು ಡೆತ್ ಬರೆದಿಟ್ಟು ಪವಿತ್ರಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇದನ್ನು ಓದಿ –ಜಪಾನ್ : ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಜೀವ ಕಳೆದುಕೊಂಡಿದ್ದಾಳೆ. ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಡೆತ್​ನೋಟ್​ ಕೂಡ ಬರೆದಿಟ್ಟಿದ್ದಾಳೆ.

ಇನ್ಟಾಗ್ರಾಂ ನಲ್ಲಿ ಪರಿಚಯವಾದ ಹುಡಗನ ಜೊತೆ ಲವ್ ಮಾಡಿದೆ, ಈಗ ಲವ್​ ಫೇಲ್ಯೂರ್​ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ.

ಚಿಂತಾಮಣಿ ಗ್ರಾಮಾಂತರ ಪೊಲೀಸರು ಪ್ರಕರಣ ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024