ಗಂಡನನ್ನು ತೊರೆದು ಬಂದ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.
ರಾಯಚೂರು ಮೂಲದ ಬಸವರಾಜು (28) ಹಾಗೂ ಜ್ಯೋತಿ (26) ಮೃತರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶಾಂತಿ ನಗರದಲ್ಲಿ ಈ ಘಟನೆ ನಡೆದಿದೆ.
ಕಳೆದ 20 ದಿನಗಳ ಹಿಂದೆ ದೇವನಹಳ್ಳಿಯ ಶಾಂತಿ ನಗರದಲ್ಲಿ ಬಾಡಿಗೆ ಮನೆ ಪಡೆದು ಗಂಡ-ಹೆಂಡತಿ ಎಂದು ಇಬ್ಬರು ವಾಸವಾಗಿದ್ದರು. ಆದರೆ ಕಳೆದ ಭಾನುವಾರದಿಂದ ಮನೆಯಿಂದ ಇಬ್ಬರು ಹೊರಬಂದಿಲ್ಲ. ಅಕ್ಕ ಪಕ್ಕದವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಾಗಿಲು ತೆರೆದು ನೋಡಿದಾಗ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ