December 25, 2024

Newsnap Kannada

The World at your finger tips!

ramnagr v

ಮಾ.27 ಮೆಗಾ ಲೋಕ ಅದಲಾತ್: ನೊಂದಣಿಗೆ ಮಾ.26 ಕೊನೆ ದಿನ

Spread the love

ರಾಮನಗರ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಮಾಚ್೯ 27 ರಂದು ನಡೆಯುವ ಮೆಗಾ ಲೋಕ ಅದಾಲತ್ ಗಾಗಿ ಮಾಚ್೯ 26 ವರೆಗೆ ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ. ಜಿ. ರಮಾ ತಿಳಿಸಿದ್ದಾರೆ.

ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಾದ್ಯಂತ ಇರುವ 18 ಬೆಂಚ್ ಗಳಲ್ಲಿ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ. ರಾಜಿ ಸಂಧಾನದ ಮೂಲಕ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ. ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ.ಜಿ. ರಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್ ಲೈನ್ :

ರಾಮನಗರ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಮಾಚ್೯ 27 ರಂದು ಏಕ ಕಾಲಕ್ಕೆ ಮೆಗಾ ಲೋಕ ಅದಾಲತ್ ನಡೆಯಲಿದೆ. ಕಕ್ಷಿದಾರರು ಹಾಗೂ ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ಖುದ್ದಾಗಿ ಭಾಗವಹಿಸಬಹುದು ಇಲ್ಲವೆ ಆನ್ ಲೈನ್ ಮೂಲಕವೂ ಭಾಗವಹಿಸಬಹುದು ಎಂದು ಸತ್ರ ನ್ಯಾಯಾಧೀಶರು ತಿಳಿಸಿದರು.

ರಾಜಿ ಪ್ರಕರಣಗಳು:

ಜಿಲ್ಲೆಯಲ್ಲಿ ಒಟ್ಟು 43,108 ಪ್ರಕರಣಗಳು ಬಾಕಿ ಇದ್ದು, ಇವುಗಳನ್ನು ಮೆಗಾ ಲೋಕ ಅದಾಲತ್ ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥ ಪಡಿಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಕರಣಗಳ ರಾಜಿಗೆ ಒತ್ತು:

ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಅಪಘಾತ, ಕಂತು ಕಟ್ಟದಿರುವುದು, ಪರಿಹಾರ ವ್ಯಾಜ್ಯ, ಆಸ್ತಿ ಸಂಬಂಧಿತ, ಕೌಟುಂಬಿಕ ಪ್ರಕರಣ, ವಿಮೆ, ಹಣಕಾಸು ವ್ಯಾಜ್ಯ, ಸಣ್ಣ ಪುಟ್ಟ ಸಿವಿಲ್ ವ್ಯಾಜ್ಯ, ಲೇವಾದೇವಿ, ಬಾಡಿಗೆ, ಅಪಘಾತ ಪರಿಹಾರ, ವಾಹನ ವಿಮಾ ಕಂತು ಬಾಕಿ, ಭೂಮಿ ಖರೀದಿ ಸಂಬಂಧಿತ ಪ್ರಕರಣಗಳನ್ನು ರಾಜಿಗಾಗಿ ನಿಗದಿಪಡಿಸಲಾಗಿದೆ ಎಂದು ವೆಂಕಟಪ್ಪ ಹೇಳಿದ್ದಾರೆ

ಮಾಚ್೯ 27 ರಂದು ಆನ್ ಲೈನ್ ಮೂಲಕ ಅಥವಾ ಖುದ್ದಾಗಿ ಭಾಗವಹಿಸಿ ಪ್ರಕರಣ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ನ್ಯಾಯಾಲಯಕ್ಕೆ ಬರದೇ ಒಂದೇ ಒಂದು ಬಾರಿಗೆ ನ್ಯಾಯಸಮ್ಮತವಾಗಿ ರಾಜಿ ಇಲ್ಲವೆ ಸಂಧಾನದ ಮೂಲಕ ಇವುಗಳನ್ನು ಹೆಚ್ಚಿನ ಶುಲ್ಕವಿಲ್ಲದೆ ಎರಡೂ ಕಡೆಯವರು ಆನ್ ಲೈನ್ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!