ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ರಸ್ತೆಯ ಮದ್ದೂರು ಬೈಪಾಸ್ ನವೆಂಬರ್ ಅಂತ್ಯಕ್ಕೆ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ. ಎಕ್ಸ್‌ಪೆನ್ಷನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ. ನವೆಂಬರ್ 8ಕ್ಕೆ ʻಚಂದ್ರಗ್ರಹಣʼ. ಭಾರತದಲ್ಲಿ ಯಾವ ಸಮಯ, ಎಲ್ಲೆಲ್ಲಿ ಗೋಚರ ?
ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ.
ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬಹುದು. ಕೆಲವೆಡೆ ಕೆನಾಲ್, ಅಂಡರ್ ಪಾಸ್‍ನ ಸಣ್ಣ ಪುಟ್ಟ ಕೆಲಸವಿದೆ, ಆ ಕೆಲಸದ ಬಳಿ ಟ್ರಾಫಿಕ್ ಡೈವರ್ಟ್ ಮಾಡಿ, ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೇಸ್‍ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ