ಪುಟ್ಟಲಿಂಗಮ್ಮ(52) ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸವ ಇತ್ತು. ಈ ಕೊಂಡೋತ್ಸವ ನೋಡಲು ಹಳೆಯ ಕಟ್ಟಡದ ಮೇಲೆ ಜನರು ನಿಂತಿದ್ದರು.
ಹಳೆ ಕಟ್ಟಡವಾದ್ದರಿಂದ ಮನೆಯ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ಈ ದುರ್ಘಟನೆಯಲ್ಲಿ ಸುಮಾರು 30 ರಿಂದ 40 ಜನರಿಗೆ ಗಾಯವಾಗಿದೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾಧಿಕಾರಿ ಅಶ್ವಥಿ ಹಾಗೂ ಜಿಲ್ಲಾ ಆರೋಗ್ಯಧಿಕಾರಿ ಧನಂಜಯ್, ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಗಾಯಗೊಂಡವರಲ್ಲಿ 11 ಮಕ್ಕಳು ಕೂಡ ಇದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿರುವ ಡಿಸಿ ಅಶ್ವಥಿ ಈ ಘಟನೆಯಲ್ಲಿ 45ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
52 ವರ್ಷದ ಪುಟ್ಟಲಿಂಗಮ್ಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಗೊಂಡವರ ಆರೋಗ್ಯ ಸ್ಥಿರವಾಗಿದೆ. ಹಳೆಯ ಕಟ್ಟಡವಾಗಿತ್ತೆ ಎಂಬುದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ತೇವೆ ಎಂದಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ