ಮದ್ದೂರಿನಲ್ಲಿ ಕೊಂಡೋತ್ಸವದ ವೇಳೆ ಅವಘಡ; ಮಹಿಳೆ ಸಾವು, 45ಕ್ಕೂ ಹೆಚ್ಚು ಮಂದಿಗೆ ಗಾಯ

Team Newsnap
1 Min Read

ಕೊಂಡೋತ್ಸವ ನಡೆಯುತ್ತಿದ್ದ ವೇಳೆ ನಡೆದ ಅವಘಡದಿಂದ ಕಟ್ಟಡ ಒಂದರ ಸಜ್ಜ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದಘಟನೆ ಮಂಡ್ಯಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ

ಪುಟ್ಟಲಿಂಗಮ್ಮ(52) ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸವ ಇತ್ತು. ಈ ಕೊಂಡೋತ್ಸವ ನೋಡಲು ಹಳೆಯ ಕಟ್ಟಡದ ಮೇಲೆ ಜನರು ನಿಂತಿದ್ದರು.

WhatsApp Image 2022 03 29 at 12.50.09 PM

ಹಳೆ ಕಟ್ಟಡವಾದ್ದರಿಂದ ಮನೆಯ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ಈ ದುರ್ಘಟನೆಯಲ್ಲಿ ಸುಮಾರು 30 ರಿಂದ 40 ಜನರಿಗೆ ಗಾಯವಾಗಿದೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾಧಿಕಾರಿ ಅಶ್ವಥಿ ಹಾಗೂ ಜಿಲ್ಲಾ ಆರೋಗ್ಯಧಿಕಾರಿ ಧನಂಜಯ್, ಮಿಮ್ಸ್​ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಗಾಯಗೊಂಡವರಲ್ಲಿ 11 ಮಕ್ಕಳು ಕೂಡ ಇದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿರುವ ಡಿಸಿ ಅಶ್ವಥಿ ಈ ಘಟನೆಯಲ್ಲಿ 45ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

52 ವರ್ಷದ ಪುಟ್ಟಲಿಂಗಮ್ಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಗೊಂಡವರ ಆರೋಗ್ಯ ಸ್ಥಿರವಾಗಿದೆ. ಹಳೆಯ ಕಟ್ಟಡವಾಗಿತ್ತೆ ಎಂಬುದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ತೇವೆ ಎಂದಿದ್ದಾರೆ.

Share This Article
Leave a comment