November 15, 2024

Newsnap Kannada

The World at your finger tips!

madarasa fgag

ಮದರಸಾಗಳಲ್ಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಲೇಬೇಕು – ಸರ್ಕಾರದಿಂದ ಆದೇಶ

Spread the love

ಆಗಸ್ಟ್ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗುತ್ತಿದೆ . ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಮದರಸಾಗಳಲ್ಲೂ ಕಡ್ಡಾಯವಾಗಿ ಧ್ವಜ ಹಾರಲೇಬೇಕೆಂದು ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಸಿದ್ದತೆ ಮಾಡುತ್ತಿದೆ.

ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಈ ಅದೇಶವನ್ನು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸಬೇಕು.

ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜನೆ ಮಾಡಬೇಕು ಎಂದು ಸೂಚಿಸುವಂತೆ ಹೇಳಿದ್ದಾರೆ. ಮುಖ್ಯವಾಗಿ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಲಾಗುತ್ತಿದೆ.

ಬಿಲ್ ಗೇಟ್ಸ್‌ರನ್ನೇ ಹಿಂದಿಕ್ಕಿದ ಗೌತಮ್ ಅದಾನಿ ಶ್ರೀಮಂತರ ಪಟ್ಟಿಯಲ್ಲಿ 4ನೇ ಸ್ಥಾನ

ಈ ನಡುವೆ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!