ಮಧುರೈ ರೈಲಿನಲ್ಲಿಅಗ್ನಿ ಅವಘಡ: 9 ಮಂದಿ ಪ್ರಯಾಣಿಕರ ಸಾವು, 20 ಮಂದಿಗೆ ಗಂಭೀರ ಗಾಯ

Team Newsnap
1 Min Read

ಮಧುರೈ: ಮಧುರೈ ರೈಲ್ವೇ ಜಂಕ್ಷನ್‌ನಲ್ಲಿ ನಿಂತಿದ್ದ ಪ್ರವಾಸಿ ರೈಲಿಗೆ ಬೆಂಕಿ ತಗುಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗಿನ ಜಾವ 5.15 ಕ್ಕೆ ಸಂಭವಿಸಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿತ್ತು.

ಮೊದಲು ಇಬ್ಬರು ಸಾವನ್ನಪ್ಪಿದರು. ಆದ್ರೆ, ಇದೀಗ ಆಸ್ಪತ್ರೆಗೆ ದಾಖಲಾದ 7ಮಂದಿ ಚಿಕಿತ್ಸೆಗೆ ಫಲಿಸದೇ ಸಾವನ್ನಪ್ಪಿದ್ದಾರೆ.

20 ಕ್ಕೂ ಹೆಚ್ಚು ಮಂದಿ ಗಂಭೀರವಾದ ಸುಟ್ಟಗಾಯಗಳಿಗೆ ಒಳಗಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಎರಡು ಬೋಗಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಬೆಂಕಿ ಮತ್ತೆ ಹೊತ್ತಿಕೊಳ್ಳುವುದನ್ನು ತಡೆಯಲು ಅಗ್ನಿಶಾಮಕ ದಳದವರು ಸುಟ್ಟ ಕೋಚ್‌ಗಳನ್ನು ತಂಪಾಗಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮೃತರ ಸಂಬಂಧಿಕರೊಂದಿಗೆ ಗುರುತನ್ನು ಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ.ಚಂದ್ರಯಾನ-3 ಲ್ಯಾಂಡಿಂಗ್ ಸ್ಥಳ ‘ಶಿವಶಕ್ತಿ’ ಚಂದ್ರಯಾನ-2 ಪತನ ಸ್ಥಳಕ್ಕೆ ‘ತಿರಂಗಾ’ ನಾಮಕರಣ – ಪ್ರಧಾನಿ ಪ್ರಕಟ

ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ ಪ್ರಯಾಣಿಕರು ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್‌ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಈ ವೇಳೆ 2 ಬೋಗಿಗಳಲ್ಲಿ ಹಠಾತ್‌ ಬೆಂಕಿ ಕಾಣಿಸಿಕೊಂಡಿದೆ.

Share This Article
Leave a comment