December 19, 2024

Newsnap Kannada

The World at your finger tips!

shivaling

ಮೈಸೂರಿನಲ್ಲಿ ಸ್ಥಾಪನೆಯಾಗಲಿದೆ ಮಹಾಶಿವಲಿಂಗ

Spread the love

ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಲಿಂಗದೇವರಕೊಪ್ಪಲಿನಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣವಾಗುತ್ತಿರುವ ಮಹಾಶಿವಲಿಂಗ ಸ್ಥಾಪನೆ ಹಾಗೂ ರಾಜಯೋಗ ಮ್ಯೂಸಿಯಂ ನಿರ್ಮಾಣದ ಭೂಮಿ ಪೂಜೆಯನ್ನು ಸಹಕಾರ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ನೆರವೇರಿಸಿದರು.


ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಸಂಸ್ಕೃತಿ, ಸಂಸ್ಕಾರಗಳು ಮಾಯವಾಗುತ್ತಿರುವ ಇಂದಿನ ಆಧುನಿಕ ದಿನಗಳಲ್ಲಿ ಜೀವನದ ಮೌಲ್ಯಗಳು, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದವರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಸಾರ್ವಜನಿಕರಲ್ಲಿ ಆಧ್ಯಾತ್ಮಿಕತೆಯ ವಿಚಾರಧಾರೆಗಳನ್ನು ಬಿತ್ತುವ ಕಾರ್ಯದ ಜತೆಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಸರ್ವರ ಹಿತವನ್ನು ಬಯಸಿ ಸದಾ ಸಮಾಜ ಒಳಿತಿಗಾಗಿ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ದುಡಿಯುತ್ತಿದೆ ಎಂದರು.


ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ರಾಜಯೋಗಿ ಬಿಕೆ ಕರುಣಾಜಿ, ಬ್ರಹ್ಮಕುಮಾರಿಸ್ ಮುಖ್ಯ ಸಂಚಾಲಕರಾದ ರಾಜಯೋಗಿನಿ ಬಿಕೆ ಲಕ್ಷ್ಮೀಜಿ ಮತ್ತಿತರರು ಇದ್ದರು.

Copyright © All rights reserved Newsnap | Newsever by AF themes.
error: Content is protected !!