ಮೈಸೂರು ಡೈರಿ (ಮೈಮುಲ್) ಚುನಾವಣೆಯಲ್ಲಿ ಏರ್ಪಟ್ಟಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿದೆ.
ಕಾಂಗ್ರೆಸ್ ಜೊತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ಮೈಸೂರು ಮೇಯರ್ ಚುನಾವಣೆ ಗೆದ್ದ ಬೆನ್ನಲ್ಲೇ
ಮೈಮುಲ್ ಎಲೆಕ್ಷನ್ ಗೆಲ್ಲುವ ಜೆಡಿಎಸ್ ಕನಸಿಗೆ ಈಗ ತಣ್ಣೀರೆರಚಿದಂತಾಗಿದೆ.
ಮಾರ್ಚ್ 16ರಂದು ಮೈಮುಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಎಲೆಕ್ಷನ್ನಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್-ಜೆಡಿಎಸ್ ನಾಯಕರು ಒಂದಾಗಿದ್ದರು.
ಆದರೆ ಮೈಸೂರು ಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಮುಖಭಂಗವಾಗಿರುವ ಹಿನ್ನೆಲೆ, ಜಿಲ್ಲೆಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು ಜೆಡಿಎಸ್ ವಿರುದ್ಧ ತಿರುಗಿಬಿದ್ದಿದ್ದಾರೆ.
ಮೈಸೂರು ವಿಭಾಗದ 7 ಸ್ಥಾನಗಳಲ್ಲಿ 4 ಮಂದಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮೂರು ಜೆಡಿಎಸ್ ಬೆಂಬಲಿತರು ಒಗ್ಗೂಡಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದರು.
ಕೈ ನಾಯಕರು ಮೈಮುಲ್ ಚುನಾವಣೆ ಗೆಲ್ಲಲು ಸಾರಾ ಮಹೇಶ್ ಜೊತೆ ಮಾತುಕತೆ ನಡೆಸಿದ್ದರು. ಆದರೆ ನಾಮಪತ್ರ ಸಲ್ಲಿಕೆಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಸಿಂಗಲ್ ಓಟ್ ಕೇಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಾಲಿಕೆಯಂತೆ ಮೈಮುಲ್ ಅಧಿಕಾರ ಹಿಡಿಯುವ ಕನಸಿಗೆ ಭಂಗ ಎದುರಾಗುವ. ಸಾಧ್ಯತೆ ಇದೆ
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು