December 27, 2024

Newsnap Kannada

The World at your finger tips!

jollywood,actor,dead

Malayali actor Pratap was found dead in the apartment ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಿ ನಟ ಪ್ರತಾಪ್ #Thenewsnap #Latestnews #Malayalam #Actor #Jollywood #Dead #Shocking_news #Chennai #Karnataka #Mandya_News #Mysuru #Bengaluru

ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಿ ನಟ ಪ್ರತಾಪ್

Spread the love

ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ (69)ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್ ಪೋಥೆನ್ ಮೃತ ದೇಹವನ್ನು ಬೆಡ್‌ರೂಮ್‌ನಲ್ಲಿ ನೋಡಿ ಶಾಕ್ ಆಗಿದ್ದಾರೆ.ಜಮ್ಮು- ಕಾಶ್ಮೀರದ ಪೂಂಚ್ ನಲ್ಲಿ ಗುಂಡಿನ ಚಕಮಕಿ : ಇಬ್ಬರು ಯೋಧರು ಹುತಾತ್ಮ

100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್‌ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ ಕರೆ ತಂದರು.

1952 ಆಗಸ್ಟ್ 13ರಂದು ಹುಟ್ಟಿದ ಪ್ರತಾಪ್ ಮದ್ರಾಸ್‌ನಲ್ಲಿಶಿಕ್ಷಣ ಪಡೆದರು. ಸಿನಿಮಾದಲ್ಲಿ ನಟಿಸುವ ಮುನ್ನ ಪ್ರತಾಪ್ ಅವರು ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ನೂರಕ್ಕೂ ಅಧಿಕ ಚಿತ್ರಗಳಲ್ಲಿ ಪ್ರತಾಪ್ ಬಣ್ಣ ಹಚ್ಚಿದ್ದಾರೆ.

1985ರಲ್ಲಿ ನಟಿ ರಾಧಿಕಾ ಅವರನ್ನು ಪ್ರತಾಪ್ ಮದುವೆಯಾದರು. 1986ರಲ್ಲಿ ಈ ಜೋಡಿ ದೂರ ದೂರ ಆಯ್ತು. 1990ರಲ್ಲಿ ಅಮಲಾ ಸತ್ಯನಾಥ್ ಎಂಬುವವರನ್ನು ಪ್ರತಾಪ್ ಮದುವೆಯಾದರು. ಈ ಜೋಡಿಗೆ ಒಬ್ಬಳು ಮಗಳಿದ್ದಾಳೆ.

Copyright © All rights reserved Newsnap | Newsever by AF themes.
error: Content is protected !!