ಕಾಂಗ್ರೆಸ್ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

Team Newsnap
1 Min Read

24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ, ಎರಡನೇ ಕನ್ನಡಿಗರೊಬ್ಬರು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷದ ಅಧಿಪತಿಯಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ.

ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. 1968 ರಲ್ಲಿ ನಿಜಲಿಂಗಪ್ಪನವರು ಎಐಸಿಸಿ ಅಧ್ಯಕ್ಷರಾಗಿದ್ದರು.ಮಳವಳ್ಳಿ ಬಾಲಕಿ ಹತ್ಯೆ : ಕುಟುಂಬಕ್ಕೆ 10 ಲಕ್ಷ ರು ಪರಿಹಾರದ ಚೆಕ್ ವಿತರಿಸಿದ ಸಚಿವ , ಸಂಸದೆ.

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಬುಧವಾರ ಪ್ರಕಟವಾಗಿದೆ ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ.

ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯವಾಗಿವೆ. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್‌ 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿ ತೀವ್ರ ಮುಖಭಂಗಕ್ಕೀಡಾಗಿದ್ದಾರೆ.

Share This Article
Leave a comment