ಕಾಸರಗೋಡು ಮೂಲದ ಮಲಯಾಳಂ ನಟಿ ಶಹಾನಾ (20) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೇರಳ ಕೋಝಿಕೋಡ್ ನಲ್ಲಿ ನಟಿ ಶಹಾನಾ ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಇದನ್ನು ಓದಿ : ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ವಿದೇಶ ಪ್ರವಾಸದ ವಿರುದ್ಧ ಗೃಹ ಸಚಿವರಿಗೆ ದೂರು
ಶಹಾನಾ ಸಾವಿನ ಹಿನ್ನೆಲೆಯಲ್ಲಿ ಆಕೆಯ ಪತಿ ಸಾಜದ್ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಸಾಜದ್ ಜೊತೆ ವಿವಾಹವಾಗಿದ್ದ ನಟಿ ಶಹಾನಾ, ದಾಂಪತ್ಯ ಕಲಹ ಹಿನ್ನೆಲೆ ಮನನೊಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಶಹಾನಾ ಕನ್ನಡದ ‘ಲಾಕ್ಡೌನ್’ ಸಿನಿಮಾದಲ್ಲಿ ಕೂಡ ನಟಿಸಿದ್ದರು. ಸದ್ಯ ಲಾಕ್ಡೌನ್ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ.
ಇದನ್ನು ಓದಿ : ಅಶಿಸ್ತು, ಉದ್ಧಟತನ ತೋರಿದ ರಮ್ಮಾ – ಆರ್.ಧ್ರುವನಾರಾಯಣ್
ಶಹಾನಾ ಆತ್ಮಹತ್ಯೆ ಹಿನ್ನೆಲೆಯಲ್ಲಿ ನಟಿಯ ತಾಯಿ, ಆಕೆಯ ಪತಿಯ ಮೇಲೆ ಗಂಭೀರ ಆರೋಪ ಮಾಡಿದ್ದು, ನನ್ನ ಮಗಳಿಗೆ ಗಂಡ ಹಿಂಸೆ ಕೊಡುತ್ತಿದ್ದನು, ತುಂಬಾ ಸಲ ಬೆದರಿಕೆ ಸಹ ಹಾಕಿದ್ದ ಎಂದಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ಶಹಾನಾ ಪತಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು