January 8, 2025

Newsnap Kannada

The World at your finger tips!

amith sha

ಇದು ಆರಂಭ : ಮಮತಾ ಏಕಾಂಗಿ – 200ಕ್ಕೂ ಹೆಚ್ಚು ಸ್ಥಾನ ಬಿಜೆಪಿಗೆ ಗೆಲುವು – ಅಮಿತ್ ಶಾ

Spread the love

2021ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಪಣ ತೊಟ್ಟಿದೆ.‌

ಈ ಶಪಥದ ಬೆನ್ನಲ್ಲೇ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸಮ್ಮುಖದಲ್ಲಿ ಟಿಎಂಸಿ ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ಸೇರಿದಂತೆ 11 ಮಂದಿ ಟಿಎಂಸಿ ಶಾಸಕರು, ಓರ್ವ ಸಂಸದ ಮತ್ತು ಮಾಜಿ ಸಂಸದರೊಬ್ಬರು ಬಿಜೆಪಿ ಸೇರ್ಪಡೆಯಾದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಸಮಯದಲ್ಲಿ ಇಂದು ಮಿಡ್ನಾಪುರದಲ್ಲಿ ಬಿಜೆಪಿ ಸಮಾವೇಶದಲ್ಲಿ ಟಿಎಂಸಿ ನಾಯಕರು ಬಿಜೆಪಿಗೆ ಸೇರ್ಪಡೆಯಾದರು.

ಇದು ಆರಂಭ, ಮುಂದೆ ಕಾದಿದೆ:

amith sha1

ಟಿಎಂಸಿ ತೊರೆಯಲು ಬಿಜೆಪಿ ಪ್ರಚೋದಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳುತ್ತಿದ್ದಾರೆ. ಆದರೆ ಅವರು ಕಾಂಗ್ರೆಸ್ ತೊರೆದು ಟಿಎಂಸಿ ಪಕ್ಷವನ್ನು ಸ್ಥಾಪಿಸಲಿಲ್ಲವೇ? ಇದು ಕೇವಲ ಆರಂಭ ಅಷ್ಟೇ. ಚುನಾವಣೆ ಸಮಯದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಆಗಲಿದ್ದಾರೆ ಎಂದು ಅಮಿಶ್ ಶಾ ಗುಡುಗಿದರು.

ಮುಂದಿನ ಚುನಾವಣೆಯಲ್ಲಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Copyright © All rights reserved Newsnap | Newsever by AF themes.
error: Content is protected !!