February 27, 2025

Newsnap Kannada

The World at your finger tips!

, suicide, harrasment , crime

ಪೊಲೀಸ್ ವಿಚಾರಣೆಗೆ ಭಯಗೊಂಡ ಯುವಕ ನೇಣಿಗೆ ಶರಣು!

Spread the love

ವಿಜಯಪುರ: ಪೊಲೀಸ್ ವಿಚಾರಣೆಗೆ ಭಯಗೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಮೌನೇಶ್‌ನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರಿಂದ, ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮೌನೇಶ್ ಅವರನ್ನು ವಿಚಾರಣೆಗೆ ಕರೆಸಿದ್ದರು.

ಗುರುವಾರ ಕೂಡ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ವಿಚಾರಣೆಗೆ ಹೆದರಿದ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ಆತ್ಮಹತ್ಯೆ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!

ಈ ಘಟನೆ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Copyright © All rights reserved Newsnap | Newsever by AF themes.
error: Content is protected !!