ಮಡಿಕೇರಿ : ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸಾವಿಗೀಡಾದ ದುರ್ಘಟನೆ ನಡೆದಿದೆ.
ಒಂಟಿ ನಳಿಗೆ ಬಂದೂಕು ಕೆಳಗೆ ಬಿದ್ದು, ಗುಂಡು ಆಕಸ್ಮಿಕವಾಗಿ ಸಿಡಿದಿರುವ ಶಂಕೆ ವ್ಯಕ್ತವಾಗಿದ್ದು , ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ ವೈನ್ ಶಾಪ್ ಹೊಂದಿದ್ದು, ಈ ದುರಂತ ಅವರ ವೈನ್ ಶಾಪ್ ಎದುರು ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ.ಇದನ್ನು ಓದಿ –ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಈ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣವನ್ನು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
More Stories
ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ