crime

ಗುಂಡು ಹಾರಿಸಿ ಆತ್ಮಹತ್ಯೆ- ಮಾಜಿ ಸಚಿವ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ FIR

ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್​​ ಕೇಸ್​​ ತನಿಖೆ ತೀವ್ರಗೊಂಡಿದೆ.

ಕಗ್ಗಲಿಪುರ ಪೊಲೀಸರು ಡೆತ್​ ನೋಟ್​ನಲ್ಲಿ ಉಲ್ಲೇಖಿಸಲಾದ ಅರವಿಂದ ಲಿಂಬಾವಳಿ ಸೇರಿದಂತೆ ಆರು ಮಂದಿ ಎಫ್​​ಐಆರ್​ ದಾಖಲಿಸಿದ್ದಾರೆ.ವೈಕುಂಠ ಏಕಾದಶಿ 2023 ( Vaikuntha Ekadashi )

ಮೃತ ವ್ಯಕ್ತಿಯು ಮೈಸೂರು ನಿವಾಸಿ. ಈತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದ. ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಈತ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಅರವಿಂದ ಲಿಂಬಾವಳಿ, ಡಾ. ಜಯರಾಮ್ ರೆಡ್ಡಿ, ರಾಘವ ಭಟ್​ ನನ್ನ ಸಾವಿಗೆ ಕಾರಣ ಎಂದು ಬರೆದಿದ್ದ.

ಈಗಾಗಲೇ ಪೊಲೀಸರು ತನಿಖೆ ಭಾಗವಾಗಿ ಮೊದಲ ಹಂತದಲ್ಲಿ ಪ್ರದೀಪ್​​​ ಕಾಲ್​ ರೆಕಾರ್ಡ್​ ಡೀಟೈಲ್ಸ್​​ ತೆಗೆದಿದ್ದಾರೆ. ಪ್ರದೀಪ್​ ಸಿಡಿಆರ್​​ ಆಧಾರದ ಮೇರೆಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರದೀಪ್​ ಜತೆಗೆ ಯಾರ ಸಂಬಂಧ ಇದೆ. ಮೃತ ಪ್ರದೀಪ್​​ ಯಾರೊಂದಿಗೆ ವ್ಯವಹಾರ ಮಾಡಿದ್ದರು. ಆತನ ವಾಟ್ಸಪ್​​ನಲ್ಲಿ ಡೀಟೈಲ್ಸ್​ ಏನಿದೆ..? ಸೂಸೈಡ್​ ಮಾಡಿಕೊಳ್ಳುವಾಗ ಬಳಸಿದ ಗನ್​ ಯಾರದ್ದು..? ಅದರ ಲೈಸನ್ಸ್​ ನಂಬರ್​​ ಏನು..? ಗನ್​​ ಮೇಲಿರುವ ಬೆರಳಚ್ಚು ಯಾರದ್ದು..? ಹೀಗೆ ಹತ್ತಾರು ವಿಚಾರಗಳ ಕುರಿತಾದ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024