ಸುರತ್ಕಲ್ ನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆ – 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

Team Newsnap
1 Min Read

ಮಂಗಳೂರಿನ ಸುರತ್ಕಲ್ ಕಾಟಿಪಳ್ಳದಲ್ಲಿ ಅಂಗಡಿ ಮಾಲೀಕನನ್ನು ಹತ್ಯೆ ಮಾಡಲಾಗದೆ

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಾಲ್ಕು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ

ಡಿ.27ರ ಮುಂಜಾನೆ 6 ಗಂಟೆಯವರೆಗೆ ಸುರತ್ಕಲ್, ಪಣಂಬೂರು, ಕಾವೂರು, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ. ದೇಶದಲ್ಲಿ ಮತ್ತೆ ಲಾಕ್ ಡೌನ್ ಸಾಧ್ಯತೆ? ಕೇಂದ್ರದಿಂದ ಮೂರು ಮಹತ್ವದ ನಿರ್ಧಾರ

ಇಬ್ಬರು ದುಷ್ಕರ್ಮಿಗಳು ಜಲೀಲ್‌(40)ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿ ಕುಳಿತಿದ್ದಾಗ ಅಂಗಡಿಯ ಪಕ್ಕದ ರಸ್ತೆಯಲ್ಲಿ ದ್ವಿಚಕ್ರವಾಹನವನ್ನು ಇಟ್ಟು ಏಕಾಏಕಿ ಚೂರಿ ಇರಿದು ಪರಾರಿಯಾಗಿದ್ದರು.

ಮೃತ ಜಲೀಲ್ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ನೈತಂಗಡಿಯಲ್ಲಿ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿ ನಡೆಸುತ್ತಿದ್ದರು. ಹೊಸ ವರ್ಷಕ್ಕೆ LPG ಸಿಲಿಂಡರ್ ಬೆಲೆ ಇಳಿಕೆ ಸಾಧ್ಯತೆ

ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಲೀಲ್‌ ಅವರ ಎದೆಯ ಭಾಗ ಮತ್ತು ಬೆನ್ನಿಗೆ ಹರಿತವಾದ ಚೂರಿಯಿಂದ ಇರಿದಿದ್ದು, ಅವರ ಬೆನ್ನಿನಲ್ಲಿದ್ದ ಚೂರಿಯನ್ನು ತೆಗೆದ ಫಾರೂಕ್ ಅವರು ತಕ್ಷಣ ಕಾರಿನಲ್ಲಿ ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಜಲೀಲ್ ಮೃತಪಟ್ಟಿದ್ದಾರೆ.

Share This Article
Leave a comment