ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳ ಆರೋಪ ಸಾಬೀತಾದರೆ ಕಡ್ಡಾಯ ನಿವೃತ್ತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಸುಮಾರು 16 ವಿಷಯಗಳ ಮೇಲೆ ಚರ್ಚೆ ನಡೆಯಿತು.
ಪ್ರಮುಖವಾಗಿ ಲೋಕಾಯುಕ್ತ ಕೇಸ್ ನಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡುವ ಬಗ್ಗೆಯೂ ಚರ್ಚೆಯಾಗಿ, ಈ ನಿಟ್ಟಿನಲ್ಲಿಯೂ ಸಂಪುಟ ಸಭೆ ಸಮ್ಮತಿ ಸೂಚಿಸಿದೆ.
ಲೋಕಾಯುಕ್ತ ಪ್ರಕರಣ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ.ಹೆಚ್.ನಾಗೇಶ್ ಅವರಿಗೆ 5 ವರ್ಷ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ವಜಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ
ಲೋಕಾಯುಕ್ತ ಕೇಸ್ ನಲ್ಲಿ ಸಿಕ್ಕಿಬಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ.ಉಷಾ ಕದರಮಂದಲಗಿ, ಇಂದಿರಾ ನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ.ನಾಗಮಣಿ ಅವರ ಕಡ್ಡಾಯ ನಿವೃತ್ತಿಗೆ ಸಂಪುಟ ನಿರ್ಣಯ ಕೈಗೊಂಡಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ