February 18, 2026

Newsnap Kannada

The World at your finger tips!

mandya

ಮಂಡ್ಯ: ವಿ.ಸಿ. ನಾಲೆಗೆ ಕಾರು ಉರುಳಿ ಮೂವರ ದುರ್ಮರಣ

Spread the love

ಮಂಡ್ಯ : ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿ.ಸಿ. ನಾಲೆಗೆ ಕಾರು ಉರುಳಿದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಈ ಘಟನೆ ಇಂದು ಮಧ್ಯಾಹ್ನ 12.30ರ ಸುಮಾರಿಗೆ ಸಂಭವಿಸಿದೆ. ಪಾಂಡವಪುರದಿಂದ ಮಂಡ್ಯಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿ.ಸಿ. ನಾಲೆಗೆ ಉರುಳಿದೆ. ಅಪಘಾತದಲ್ಲಿ ಕಾರಿನ ಮಾಲೀಕ ಫಯಾಜ್ ಅಲಿಯಾಸ್ ಬ್ಯಾಟರಿ ಸ್ಥಳದಲ್ಲಿಯೇ ಮೃತಪಟ್ಟರೆ, ನಯಾಜ್ ಎಂಬಾತನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆಯಲ್ಲಿ ನಾಪತ್ತೆಯಾಗಿದ್ದ ಅಸ್ಲಂ ಪಾಷ ಮತ್ತು ಪೀರ್ ಖಾನ್ ಅವರ ಮೃತದೇಹಗಳನ್ನು ಅಗ್ನಿಶಾಮಕ ದಳ ಮತ್ತು ಮುಳುಗು ತಜ್ಞರು ಸುಮಾರು ಎರಡು ಗಂಟೆಗಳ ಕಾರ್ಯಾಚರಣೆಯ ಬಳಿಕ 20 ಅಡಿ ಆಳದಲ್ಲಿ ಪತ್ತೆಹಚ್ಚಿ, ಕ್ರೇನ್ ಮೂಲಕ ಕಾರುವನ್ನು ಮೇಲಕ್ಕೆತ್ತಿ ಹೊರತೆಗೆದರು. ಮೂರು ಮೃತದೇಹಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಯವರು, “ಘಟನೆ ಬಹಳ ದುಃಖಕರವಾಗಿದೆ. ವಿ.ಸಿ. ನಾಲೆಗೆ ತಡೆಗೋಡೆ ನಿರ್ಮಿಸುವ ಬಗ್ಗೆ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ. ಇದನ್ನು ಓದಿ -ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಇದೇ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, “ತಡೆಗೋಡೆ ನಿರ್ಮಾಣದ ಸಂಬಂಧ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು” ಎಂದು ಭರವಸೆ ನೀಡಿದರು.

error: Content is protected !!