February 17, 2026

Newsnap Kannada

The World at your finger tips!

sahitya sammelana

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

Spread the love

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಧ್ವಜಾರೋಹಣದೊಂದಿಗೆ ಸಮ್ಮೇಳನದ ಕಾರುಬಾರು ಪ್ರಾರಂಭವಾಯಿತು.

ಇಂದಿನಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ವಿಜೃಂಭಣೆಯಿಂದ ಆರಂಭವಾಯಿತು.

ರಾಷ್ಟ್ರಧ್ವಜ, ನಾಡಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣದ ಮೂಲಕ ಸಮ್ಮೇಳನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಸಚಿವ ಚೆಲುವರಾಯಸ್ವಾಮಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ನಾಡಧ್ವಜಾರೋಹಣ ನೆರವೇರಿಸಿದರು.ಇದನ್ನು ಓದಿ –ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ

ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

error: Content is protected !!