Mandya

ಮಂಡ್ಯ ಎಸಿ ಭರವಸೆ: ನಿವೇಶನ ರಹಿತರ ಧರಣಿ ತಾತ್ಕಾಲಿಕ ಹಿಂದಕ್ಕೆ

ಕಳೆದ 8 ದಿನಗಳಿಂದ ನಡೆಯುತ್ತಿದ್ದ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತರ ಧರಣಿಯನ್ನು ಉಪ ವಿಭಾಗಾಧಿಕಾರಿಗಳ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ.

ಸೋಮವಾರ ಬೆಳಿಗ್ಗೆ ಉಪ ವಿಭಾಗಾಧಿಕಾರಿ ಡಾ.ನೇಹಾ ಜೈನ್, ತಹಶೀಲ್ದಾರ್ ಚಂದ್ರಶೇಖರ ಶಂ ಗಾಳಿ, ಧರಣಿ ನಿರತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗುರುತಿಸಿರುವ ಸರ್ಕಾರಿ ಭೂಮಿಗೆ ಸಂಬಂಧಿಸಿದಂತೆ 1-5 ಪ್ರಕ್ರಿಯೆ ಮುಗಿದಿದ್ದು, ಅಳತೆ ಹದ್ದುಬಸ್ತ್ ನಡೆಸಲು ಗ್ರಾಮ ಚುನಾವಣೆ ಎದುರಾಗಿದೆ.

ಮುಂದಿನ ಮೂರು ತಿಂಗಳಲ್ಲಿ ಭೂಮಿ‌ ಗುರುತಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ವಿವರಿಸಿದರು.

ಇಂದೇ ಗುರುತಿಸಿರುವ ಸರ್ಕಾರಿ ಭೂಮಿಯ ಪರಿಶೀಲನೆ ನಡೆಸಿ ವರದಿ ಮಾಡಲಾಗುವುದು ಎಂದು ಉಪ ವಿಭಾಗಾಧಿಕಾರಿ ವಿವರಿಸಿದರು.

ಬೂದನೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಬಿ.ಕೆ.ಸತೀಶ್ ಮಾತನಾಡಿ, ತಾಲ್ಲೂಕು ಆಡಳಿತವೇ ಗುರುತಿಸಿರುವ ಭೂಮಿ‌ ನೀಡಲು ಮೀನಾಮೇಷ ಎಣಿಸಬಾರದು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ಗುರುತಿಸಿರುವ ಭೂಮಿ ಲಭ್ಯವಿಲ್ಲದಿದ್ದಲ್ಲಿ ಬದಲಿ‌ ಭೂಮಿ ಮಂಜೂರು ಮಾಡಲು ಮನವಿ ಮಾಡಿದರು.
ಬಳಿಕ ಮಾತನಾಡಿದ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಮುಂಚೂಣಿ ನಾಯಕ ಎಂ.ಬಿ.ನಾಗಣ್ಣಗೌಡ, ಕಳೆದ 8 ದಿನಗಳಿಂದ ನಿವೇಶನರಹಿತರು ನಡೆಸಿದ ಧರಣಿ ಜಿಲ್ಲಾಡಳಿತದ ಕಣ್ಣು ತೆರೆಸಿದೆ.ಮುಂದಿನ 3 ತಿಂಗಳಲ್ಲಿ ನಿವೇಶನ ದೊರಕಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ. ಕೊಂಕು ಮಾತಿಗೆ ಕಿವಿಗೂಡದೇ ನಿವೇಶನ ಪಡೆಯಲು‌ ಎಲ್ಲ ಸಂಘಟಿತರಾಗಿರಬೇಕು ಎಂದು ಹೇಳಿದರು.

ಜಿಲ್ಲಾಡಳಿತ ನಿವೇಶನರಹಿತರಿಗೆ ನೀಡಿರುವ ಭರವಸೆ ಈಡೇರದಿದ್ದಲ್ಲಿ ಮುಂದೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅದಕ್ಕೆ ಅಸ್ಪದ ಕೊಡಬಾರದು ಎಂದು ಎಚ್ಚರಿಸಿದರು.

ಈ ವೇಳೆ ಮದ್ದೂರು ತಾಲ್ಲೂಕು ಕಚೇರಿ ಶಿರಸ್ತೇದಾರ್ ಕೆ.ಜಯರಾಂ ಮೂರ್ತಿ, ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶ, ಸವಿತಾ, ರಂಜಿತಾ, ಚೇತನ್, ಕುಳ್ಳಪ್ಪ, ಕಾಮಾಕ್ಷಿ, ಮಾದೇವಿ ಮೊದಲಾದವರಿದ್ದರು.

Team Newsnap
Leave a Comment
Share
Published by
Team Newsnap

Recent Posts

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024