ಹೆಚ್.ಎಲ್. ನಾಗರಾಜು, ಇನ್ನೂ ಕೆಲವು ದಿನಗಳಲ್ಲಿ ತನ್ನ ಅಧಿಕಾರದಿಂದ ನಿವೃತ್ತಿ ಪಡೆದು ಸನ್ಯಾಸ ದೀಕ್ಷೆ ಸ್ವೀಕರಿಸುವ ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಶೀಘ್ರದಲ್ಲೇ ತನ್ನ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.
ಸನ್ಯಾಸ ದೀಕ್ಷೆಯು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದಲ್ಲಿ ನಡೆಯಲಿದ್ದು, ಚಂದ್ರಶೇಖರನಾಥ ಶ್ರೀಗಳ ಶಿಷ್ಯರಾಗುವ ನಿರೀಕ್ಷೆಯಿದೆ.
ಈ ಹಿಂದೆಯೂ 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಅವರು ‘ನಿಶ್ಚಲಾನಂದನಾಥ’ ಎಂಬ ಹೆಸರಿನಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಆ ಸಮಯದಲ್ಲಿ ಅವರು ತಹಶೀಲ್ದಾರ್ ಹುದ್ದೆ ತ್ಯಜಿಸಿ ಸ್ವಾಮೀಜಿಯಾಗಿ ಮುಂದುವರಿದಿದ್ದರು. ಆದರೆ, ಆ ಸಮಯದಲ್ಲಿ ಹಿತೈಷಿಗಳು ಮತ್ತು ಸಾರ್ವಜನಿಕರ ಒತ್ತಾಯದ ಮೇರೆಗೆ ಅವರು ಮತ್ತೆ ತನ್ನ ಅಧಿಕಾರವನ್ನು ಕೈಗೊಳ್ಳುವ ನಿರ್ಧಾರ ಮಾಡಿದ್ರು.ಇದನ್ನು ಓದಿ –ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಈಗ ಮತ್ತೆ ಅವರು ಕಾವಿ ಧರಿಸಲು ಸಜ್ಜಾಗಿದ್ದು, ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು