ನನ್ನ ಮನೆಯನ್ನು ಒಂದಿಂಚು ಜಾಸ್ತಿ ಒಡೆದರು ಕಲ್ಲಲ್ಲಿ ಹೊಡಿತೀನಿ ಎಂದು ಮಾಲೀಕ ಅವಾಜ್ ಹಾಕಿ , ನಿಗದಿಯಾದ ಕಟ್ಟಡವನ್ನಷ್ಟೇ ಹೊಡೆಯಬೇಕು. ಒಂದಿಂಚು ಜಾಸ್ತಿ ಕೆಡವಿದರೂ ನಾನು ನಿನಗೆ ಹೊಡೆಯುತ್ತೇನೆ ಎಂದು ಮನೆ ಮಾಲೀಕ ರಾಜೇಗೌಡ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.ಮೈಸೂರಿನಲ್ಲಿ ಇಸ್ಪೀಟ್ ಆಡುತ್ತಿದ್ದ ಜೆಡಿಎಸ್ ಮುಖಂಡ ಕುಳಿತಲ್ಲೇ ಕುಸಿದು ಸಾವು
ಹೆದ್ದಾರಿ ಪ್ರಾಧಿಕಾರವು ದಶಪಥ ರಸ್ತೆ ನಿರ್ಮಾಣಕ್ಕಾಗಿ ಹಲವು ಮನೆಗಳನ್ನು ಸ್ವಾಧೀನ ಪಡಿಸಿಕೊಂಡಿದೆ. ಪರಿಹಾರ ತಾರತಮ್ಯ ಆರೋಪ, ಮನೆ ಕೆಡವಲು ಕೆಲ ಮಾಲೀಕರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಲೆ ಬಾಳುವ ಜಾಗಕ್ಕೆ ಕಡಿಮೆ ಪರಿಹಾರ ನೀಡಿದ್ದಾರೆಂದು ಕೆಲ ಮಾಲೀಕರು ಆರೋಪಿಸಿದ್ದಾರೆ.
ಇಂದು ಬೆಳ್ಳಂಬೆಳ್ಳಗ್ಗೆ ಮನೆ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಆಗಮಿಸಿ ಮನೆ ತೆರವುಗೊಳಿಸಿದ್ದಾರೆ. ಈ ವೇಳೆ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಮನೆ ಕೆಡವಲು ಬಿಡಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪೊಲೀಸರು ಗ್ರಾಮಸ್ಥರನ್ನು ಬಂಧಿಸಿ ತೆರವು ಕಾರ್ಯಕ್ಕೆ ಅನುವು ಮಾಡಿಕೊಟ್ಟರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು