ಮಂಡ್ಯ : ಜಿಲ್ಲಾಧಿಕಾರಿ ಡಾ: ಕುಮಾರ ಬುಧವಾರ ಮಳವಳ್ಳಿ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಕಚೇರಿಯಲ್ಲಿ 7 ತಿಂಗಳಿನಿಂದ ಬಾಕಿ ಇದ್ದ ಮೂರು ಆರ್.ಟಿ.ಸಿ ಗೆ ಸಂಬಂಧಿಸಿದ ಅರ್ಜಿಯನ್ನು ಸ್ಥಳದಲ್ಲೇ ಪರಿಶೀಲಿಸಿ ವಿಲೇವಾರಿ ಮಾಡಿದರು.
ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ವೀಕಾರ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲಿಸಿ ಶೀಘ್ರವಾಗಿ ವಿಲೇವಾರಿ ಮಾಡಲು ತಿಳಿಸಿದರು.
ನಿಗದಿತ ಅವಧಿಯಲ್ಲಿ ಅರ್ಜಿಗಳು ವಿಲೇವಾರಿಯಾಗಬೇಕು. ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿ ಕಚೇರಿಗಳಿಗೆ ಅನಿವಾರ್ಯ ಅಲೆದಾಟವನ್ನು ತಪ್ಪಿಸಿ ಎಂದರು.
ನಂತರ ಕಚೇರಿಯಲ್ಲಿ ಪಹಣಿ ತಿದ್ದುಪಡಿ, ಭೂಮಿ ಖಾತೆ ಬದಲಾವಣೆ, ಸರ್ವೆ, ಮೋಜಿಣಿ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನೀಡಿದರು.
ತಾಲ್ಲೂಕು ಕಚೇರಿ ಪರಿಶೀಲನೆಯ ನಂತರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಪಂಡಿತಹಳ್ಳಿ ನಾಡಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.ಮೈಸೂರಿನಲ್ಲಿ 25 ಕೋಟಿ ಮೌಲ್ಯದ ಕಿಂಗ್ ಫಿಶರ್ ಮದ್ಯ ವಶ : ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ
ಮಳವಳ್ಳಿ ತಹಶೀಲ್ದಾರ್ ಉಪಸ್ಥಿತರಿದ್ದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ