December 19, 2024

Newsnap Kannada

The World at your finger tips!

teacher, learning, school

Mandya DC S Ashwathi visits exam centers on May 21st and 22nd

ಮಂಡ್ಯದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ

Spread the love

ಮಂಡ್ಯ ಜಿಲ್ಲೆಯಲ್ಲಿ ಮೇ.21 ಹಾಗೂ 22 ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನು ಓದಿ –ಮಂಡ್ಯ – ಮಳೆಹಾನಿ ಪರಿಹಾರ ಶೀಘ್ರ ಪಾವತಿ ಮಾಡಿ : ಜಿಲ್ಲಾಧಿಕಾರಿ ಎಸ್.ಅಶ್ವತಿ

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ಕ್ರಮವಹಿಸಿ ಹಾಗೂ ಪರೀಕ್ಷೆ ನಡೆಸಲು ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತಿಳಿಸಿದರು

ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕಾರ್ಯಾಚರಣೆಯ ನಿರ್ವಹಣೆ ಶೌಚಾಲಯ, ಕುಡಿಯುವ ನೀರಿನ ವಿದ್ಯುತ್ ಹಾಗೂ ಪ್ರವೇಶ ದ್ವಾರದಲ್ಲಿ ಮೊಬೈಲ್, ವಾಚ್, ಬ್ಯಾಗ್ ಸಂಗ್ರಹ ಕೇಂದ್ರ ಇತ್ಯಾದಿ ಸ್ಥಳಗಳನ್ನು ಪರಿಶೀಲನೆ ಮಾಡಿದರು.

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಆಗಾಗಿ ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಿ ಎಂದರು.
ಜಿ.ಪಂ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್.ಜೆ.ದಿವ್ಯಪ್ರಭು,
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜವರೇಗೌಡ, ಶಿಕ್ಷಣಾಧಿಕಾರಿ ಬಿ. ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿ.ಎಸ್. ಸೋಮಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!