ಮಂಡ್ಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ : ಎರಡು ದಿನ ಕಾಳಿಂಗನಹಳ್ಳಿ ಗ್ರಾಮ ವಾಸ್ತವ್ಯ ಅಂತ್ಯ

Team Newsnap
1 Min Read
Mandya District DC Walk to Villagee #thenewsnap #kannadanews #mandya #latestnews #mandya_DC #kannada

ಗ್ರಾಮೀಣ ಜನರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆಗಳನ್ನು ಪರಿಹರಿಸುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ನಾಗಮಂಗಲ ತಾಲ್ಲೂಕಿನ ಕಾಳಿಂಗನಹಳ್ಳಿಯಲ್ಲಿ ಜೂನ್ 22 ಹಾಗೂ 23 ರಂದು ನಡೆಯಿತು

ಇದನ್ನು ಓದಿ –ಅಡುಗೆ ಎಣ್ಣೆ ಲೀಟರ್‌ಗೆ : 10 ರೂಪಾಯಿಂದ 20 ರೂಪಾಯಿವರೆಗೆ ಇಳಿಕೆ ?

ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಬುಧವಾರ ಎತ್ತಿನ ಗಾಡಿಯಲ್ಲಿ ಆಗಮಿಸಿದಾಗ ಮಹಿಳೆಯರು ಕಳಸವನ್ನು ಹೊತ್ತಿ ಸ್ವಾಗತಿಸಿದರು.ಜಿಲ್ಲಾಧಿಕಾರಿಗಳು ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ ನಂತರ ಗ್ರಾಮಸ್ಥರೊಂದಿಗೆ ಕುಳಿತು ಗ್ರಾಮದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಗ್ರಾಮಸ್ಥರು ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗೆ ಕಾಂಪೌಂಡ್ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು. ಚರಂಡಿ ಸ್ವಚ್ಛತೆ ಹಾಗೂ ಕೆರೆಯ ಸ್ವಚ್ಛತೆ ಕುರಿತಂತೆ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ಜನಸಾಮಾನ್ಯರು ಕೂಡ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.

ಅಹವಾಲುಗಳನ್ನು ಆಲಿಸಿದ ನಂತರ ಮಕ್ಕಳು ನಡೆಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದರು. ಜೂನ್ 23 ರಂದು ಬೆಳಿಗ್ಗೆ ಮಕ್ಕಳೊಂದಿಗೆ ಯೋಗಾಭ್ಯಾಸ ನಡೆಸಿದರು.

ನಂತರ ಸ್ವಚ್ಛತಾ ಆಂದೋಲನದಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡಲು ಸಹಕರಿಸಬೇಕೆಂದು ಮನೆ ಮನೆಗೆ ತೆರಳಿ ಬಟ್ಟೆ ಬ್ಯಾಗ್ ಗಳನ್ನು ವಿತರಿಸಿ ಅರಿವು ಮೂಡಿಸಿದರು..

ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ನಾಗಮಂಗಲ ತಹಶೀಲ್ದಾರ್ ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a comment