ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 17 ದಿನಗಳಿಂದ ರೈತರು ಹಗಲುರಾತ್ರಿ ಧರಣಿಯನ್ನು ಕೈಗೊಂಡಿದ್ದಾರೆ. ಕಬ್ಬು ಮತ್ತು ಹಾಲಿಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡಬೇಕು. ಆ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ರೈತರು ಒತ್ತಾಯಿಸಿದ್ದರು. ಆದರೆ, ಇದುವರೆಗೂ ಸಚಿವ ಗೋಪಾಲಯ್ಯ ಅವರು ಬಂದು ವಿಚಾರಿಸಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೊರನಾಡು ಬಳಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಜೀಪ್ – ಚಾಲಕಿ ಅಕ್ಷತಾ ಸಾವು
‘ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಕಾಣೆಯಾಗಿದ್ದಾರೆ’ ಈ ಸಂಬಂಧ ಪ್ರತಿಭಟನಾ ಸ್ಥಳದಲ್ಲಿ ಬ್ಯಾನರ್‌ವೊಂದನ್ನು ಪೊಲೀಸ್ ಬ್ಯಾರಿಕೇಡ್‌ಗೆ ನೇತು ಹಾಕಲಾಗಿದ್ದು, ಅದರಲ್ಲಿ ಸಚಿವ ಗೋಪಾಲಯ್ಯ ಕಾಣೆಯಾಗಿದ್ದಾರೆ ಎಂದು ಫೋಟೊ ಹಾಕಿ ರೈತ ಸಂಘದವರು ಉಸ್ತುವಾರಿ ಸಚಿವರನ್ನು ಹುಡುಕಿಕೊಡುವಂತೆ ಮನವಿ ಮಾಡುತ್ತಿದ್ದಾರೆ. ತಮ್ಮ ಬೇಡಿಕೆಗೆ ಸಚಿವರು ಸ್ಪಂದಿಸುತ್ತಿಲ್ಲ ಎಂಬುದು ರೈತ ಸಂಘದ ಆರೋಪವಾಗಿದ್ದು, ಆಕ್ರೋಶ ಹೊರಹಾಕಿದ್ದಾರೆ.
More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು