ಈ ಸಂಗತಿಯನ್ನು ಸ್ವತಃ ಸಿಎಂ ಬೊಮ್ಮಾಯಿ ಪ್ರಕಟಿಸಿದ್ದಾರೆ.ಕೋಲಾರದ ‘DFO’ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಮಂಡ್ಯಕ್ಕೆ ತಮ್ಮನ್ನು ಜಿಲ್ಲಾ ಮಂತ್ರಿಯಾಗಿ ನೇಮಕ ಮಾಡಿದ ಮೇಲೆ ತಮಗಾದ ಅಪಮಾನ ಸಹಿಸದ ಸಚಿವ ಅಶೋಕ್ ತಮ್ಮನ್ನು ಆಸ್ಥಾನದಿಂದ ಮುಕ್ತಿಗೊಳಿಸುವಂತೆ ಕೋರಿ ಅಶೋಕ್ ಸಿಎಂ ಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ
ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ನೇಮಕದ ಬಳಿಕ ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಗೋ ಬ್ಯಾಕ್ ಅಭಿಯಾನವೇ ನಡೆದಿತ್ತು.
ಬಿಜೆಪಿ ಕಾರ್ಯಕರ್ತರು ಸೋಷಿಯಲ್ ಮೀಡಿಯಾ ಸೇರಿದಂತೆ ಬಹಿರಂಗವಾಗಿಯೇ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಈ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದಿಂದ ವಿಮುಕ್ತಗೊಳಿಸುವಂತೆ ಸಿಎಂ ಬೊಮ್ಮಾಯಿಗೆ, ಸಚಿವ ಆರ್ ಅಶೋಕ್ ಪತ್ರ ಬರೆದು ಕೋರಿಕೊಂಡಿದ್ದಾರೆ.
ಕಂದಾಯ ಇಲಾಖೆಯ ಗ್ರಾಮ ವಾಸ್ತವ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ, ವಿಧಾನಸೌಧದ ಮುಂದೆ ಜಗಜ್ಯೋತಿ ಬಸವೇಶ್ವರರ ಹಾಗೂ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ಸ್ಥಾಪಿಸಲು ಉಸ್ತುವಾರಿಯಾಗಿ ನೇಮಿಸಿದ್ದೀರಿ. 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಗೆ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಿದ್ದೀರಿ. ಈ ಎಲ್ಲಾ ಕಾರ್ಯಕ್ರಮಗಳ ನಿಮಿತ್ತ ಜವಾಬ್ದಾರಿ ಹೆಚ್ಚಾಗಿದೆ. ನನ್ನ ಉಸ್ತುವಾರಿ ಕ್ಷೇತ್ರಕ್ಕೆ ಸಮಯ ಕೊಡೋದಕ್ಕೆ ಆಗುತ್ತಿಲ್ಲ. ಹೀಗಾಗಿ ನನ್ನನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯಿಂದ ವಿಮುಕ್ತಿಗೊಳಿಸುವಂತೆ ಪತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಂದಾಯ ಸಚಿವ ಆರ್ ಅಶೋಕ್ ಕೋರಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು