ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ

Team Newsnap
1 Min Read

ಮಂಡ್ಯ : ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಒಂಟಿ ಮನೆ, ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು , ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10 ಸಾವಿರದಿಂದ 50 ಸಾವಿರದವರೆಗೂ ಶುಲ್ಕ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಪೊಲೀಸ್, ಆರೋಗ್ಯ ಇಲಾಖೆಯ ಕಣ್ತಪ್ಪಿಸಿ ಆರೋಪಿಗಳು ದಂಧೆ ನಡೆಸುತ್ತಿದ್ದರು.

ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಪಟೇಲ್, ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್, ಕೆ.ಆರ್. ನಗರದ ಶಂಕರ್ ಬಂಧಿತ ಆರೋಪಿಗಳು.

ಬಂಧಿತರಿಂದ ಸ್ಕ್ಸಾನಿಂಗ್ ಮಶೀನ್, ಕಾರುಗಳನ್ನು ವಶಕ್ಕೆ ಪಡೆಯಲಾಗಿದ್ದು ,50ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಈ ಆರೋಪಿಗಳು ಆಸ್ಪತ್ರೆಗೆ ಸೋನೋಗ್ರಫಿ ಟೆಸ್ಟ್ ಮಾಡಿಸಿಕೊಳ್ಳಲು ಬರುವವರನ್ನೇ ಟಾರ್ಗೆಟ್ ಮಾಡುತ್ತಿದ್ದರು.

ವಾರದ ಹಿಂದೆ ಕಿಂಗ್ ಪಿನ್ ಅಭಿಷೇಕ್ ಹಾಗೂ ವಿರೇಶ್ ಸೇರಿ 12 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು , ಇದೀಗ ಮತ್ತೆ 6 ಜನರನ್ನು ಬಂಧಿಸಲಾಗಿದೆ.

ಕೆಲ ವೈದ್ಯರು ಪ್ರಕರಣದಲ್ಲಿ ಭಾಗಿಯಾಗಿದ್ದು , ಅವರ ಬಂಧನಕ್ಕೂ ಖಾಕಿ ಮುಂದಾಗಿದೆ.ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment