ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು

Team Newsnap
1 Min Read

ಮಂಡ್ಯ : ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಾಗಮಂಗಲ ತಾಲೂಕು ತಿರುಮಲಾಪುರ ಗೇಟ್ ಬಳಿ ಭಾನುವಾರ ಬೆಳಗಿನ ಜಾವ ಸಂಭವಿಸಿದೆ.

ನೆಲಮಂಗಲ ಮೂಲದ ಹೇಮಂತ್ , ನವೀನ್ ಹಾಗೂ ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಲಿಸುತ್ತಿದ್ದ ಲಾರಿ ಕಾರು ಡಿಕ್ಕಿಯಾಗಿದೆ. ಹೊಡೆತ ರಭಸಕ್ಕೆ ಕಾರು ರಸ್ತೆಯ ಪಕ್ಕದ ಹಳ್ಳಕ್ಕೆ ಹೋಗಿ ಬಿದ್ದಿದೆ. ಕಾರು ಚಾಲಕ ಪ್ರಾಣಪಾಯದಿಂದ ಬಚಾವ್ ಆಗಿದ್ದಾನೆ.ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ

ಪೋಲಿಸರು ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿದ್ದಾರೆ.

Share This Article
Leave a comment