January 7, 2025

Newsnap Kannada

The World at your finger tips!

krishna

ಮಂಡ್ಯದ ಗಾಂಧಿ, ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಇನ್ನಿಲ್ಲ

Spread the love

ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಶುಕ್ರವಾರ ಮೈಸೂರಿನ ತಮ್ಮ‌ ನಿವಾಸದಲ್ಲಿ ಕೊನೆಯುಸಿರೆಳೆದರು. ‌

ಹಲವು ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲಿತ್ತಿದ್ದ ಮಾಜಿ ಸ್ಪೀಕರ್ ಕೃಷ್ಣ ಕ್ಯಾನ್ಸರ್ ಚಿಕಿತ್ಸೆಗೆ ಅವರು ಚೆನ್ನೈಗೂ ಸಹ ತೆರಳಿದ್ದರು.

ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಕೃಷ್ಣ ಅವರನ್ನು ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆತರಲಾಗಿತ್ತು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಕೃಷ್ಣ ಮಂಡ್ಯ ಜಿಲ್ಲೆಯ ಗಾಂಧಿ ಎಂದೇ ಖ್ಯಾತರಾಗಿದ್ದ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದವರು. ಮೂರು ಬಾರಿ ಕೆ.ಆರ್.ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದರು. 1996 ರಲ್ಲಿ ಮಂಡ್ಯದ ಸಂಸದರು ಸಹ ಆಗಿದ್ದರು. 1988ರಲ್ಲಿ ಎಸ್.ಆರ್.ಬೊಮ್ಮಾಯಿ ಸಂಪಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಹಾಗೂ 2006 ರಿಂದ 2008ರ ವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

ಸೃಜನಶೀಲ ರಾಜಕಾರಣಿಯಾಗಿದ್ದ ಕೃಷ್ಣ ನೈತಿಕ ಮೌಲ್ಯಗಳನ್ನು ಎತ್ತಿ‌ ಹಿಡಿದು ಬದುಕಿನಲ್ಲಿ ಆದರ್ಶಗಳನ್ನು ಅಳವಡಿಸಿಕೊಂಡಿದ್ದರು. ಸಮಾಜದ ಅಧಃಪತನಕ್ಕೆ ಭ್ರಷ್ಟಾಚಾರ ಮತ್ತು ಅಸತ್ಯದ ಹಾದಿಗಳೇ ಕಾರಣವೆಂದು ಸದಾ ಪ್ರತಿಪಾದನೆ ಮಾಡುತ್ತಿದ್ದರು.

Copyright © All rights reserved Newsnap | Newsever by AF themes.
error: Content is protected !!