ಮಂಡ್ಯ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಂಗಳವಾರ ಯಶಸ್ವಿ ಯಾಗಿದೆ.
ಮಂಡ್ಯದಲ್ಲಿ ಲಾಕ್ ಡೌನ್ ನಿಂದಾಗಿ ಎಲ್ಲಾ ಪ್ರಮುಖ ರಸ್ತೆ ಗಳು, ಬೀದಿಗಳು ಬಿಕೋ ಎನ್ನುತ್ತಿವೆ. ಮೆಡಿಕಲ್ ಸ್ಟೋರ್ ಮತ್ತು ಆಸ್ಪತ್ರೆ ಗಳನ್ನು ಹೊರತುಪಡಿಸಿ ಎಲ್ಲವೂ ಬಂದ್ ಆಗಿವೆ.
ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಎಲ್ಲಾ ಕಡೆ ಪೋಲಿಸ್ ಸರ್ಪಗಾವಲು ಹಾಕಲಾಗಿದೆ.
ಜಿಲ್ಲೆ ವ್ಯಾಪ್ತಿಯಲ್ಲಿ ಬ್ಯಾಂಕ್ ಸೇವೆಗಳಿಗೂ ನಿರ್ಬಂಧ ಹೇರಲಾಗಿದೆ. ಮೇ 25, 26, 28, 29 ರಂದು ನಾಲ್ಕು ದಿನಗಳು ಪೂರ್ತಿ ಬ್ಯಾಂಕ್ ವ್ಯವಹಾರ ನಿರ್ಬಂಧಿಸಿ ಡಿಸಿ ಅಶ್ವತಿ ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಸೇವೆ, ಹಾಲಿನ ಬೂತ್, ನ್ಯಾಯ ಬೆಲೆ ಅಂಗಡಿ ಹಾಗೂ ಕೃಷಿ ಚಟುವಟಿಕೆಗಳಿಗೆ ಪೂರಕ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಉಳಿದಂತೆ ಎಲ್ಲವೂ ಸ್ತಬ್ಧ. ದಿನಸಿ, ತರಕಾರಿ ಖರೀದಿಗೂ ಅವಕಾಶ ಇಲ್ಲ. ಹೊಟೆಲ್ ಗಳು, ಮದ್ಯದಂಗಡಿ ಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ.
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದೆ. ಅಲ್ಲದೆ ಅನಗತ್ಯವಾಗಿ ವಾಹನಗಳಲ್ಲಿ ಓಡಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಡಿಸಿ ನೀಡಿದ್ದಾರೆ.
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ