December 3, 2024

Newsnap Kannada

The World at your finger tips!

mandya bandh

ಕಾವೇರಿ ನೀರು ಬಿಟ್ಟ ನಿರ್ಧಾರ ವಿರೋಧಿಸಿ ಮಂಡ್ಯ – ಮದ್ದೂರು ಬಂದ್ ಯಶಸ್ವಿ

Spread the love

ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಿರ್ಧಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಕರೆ ನೀಡಿದ್ದ ಮಂಡ್ಯ – ಮದ್ದೂರು ಬಂದ್ ಯಶಸ್ವಿಯಾಗಿದೆ.

ಮಂಡ್ಯ – ಮದ್ದೂರು ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು . ವ್ಯಾಪಾರ ವಹಿವಾಟು ಸ್ಥಗಿತ ಗೊಂಡಿದೆ, ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳ ಬಾಗಿಲು ಮುಚ್ಚಿ ಬಂದ್ ಬೆಂಬಲಿಸಿದರು.

ಬೆಳಿಗ್ಗೆ ತೆರೆದಿದ್ದ ಹೋಟೆಲ್ ಗಳು ಬಂದ್ ಕಾವೇರುತ್ತಿದ್ದಂತೆ ಬಾಗಿಲು ಮುಚ್ಚಿದವು, ಚಲನಚಿತ್ರ ಮಂದಿರಗಳು ಬೆಳಗಿನ ಮತ್ತು ಮಧ್ಯಾಹ್ನದ ಚಿತ್ರ ಪ್ರದರ್ಶನವನ್ನು ರದ್ದು ಮಾಡಿವೆ.

ಸರ್ಕಾರಿ ಮತ್ತು ಖಾಸಗಿ ಬಸ್, ಟೆಂಪೋ ಸೇರಿ ಖಾಸಗಿ ವಾಹನ ಸಂಚಾರ ಸ್ಥಗಿತವಾಗಿತ್ತು, ಇದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು,ಆಟೋ ಸಂಚಾರ ವಿರಳವಾಗಿತ್ತು,

ಕೆಲವು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ತೆರೆದಿದ್ದ ಕಾಲೇಜುಗಳನ್ನು ಬಲವಂತವಾಗಿ ಮುಚ್ಚಿಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ರಸ್ತೆಗಳು ಬಿಕೋ ಎನ್ನುತ್ತಿದ್ದರೆ ಸಾರ್ವಜನಿಕರ ಓಡಾಟ ಕಡಿಮೆಯಾಗಿತ್ತು,
ಬೈಕ್ ಜಾಥಾ ಮೂಲಕ ಮಂಡ್ಯ ನಗರ ಸುತ್ತಿದ ಪ್ರತಿಭಟನಾಕಾರರು ಕೆಲವು ಪ್ರದೇಶಗಳಲ್ಲಿ ತೆರೆದಿದ್ದ ಅಂಗಡಿಗಳ ಬಾಗಿಲು ಮುಚ್ಚಿಸಿದರು ಪ್ರಮುಖ ಪ್ರದೇಶವಾದ ಪೇಟೆ ಬೀದಿ, ಬೆಂಗಳೂರು -ಮೈಸೂರು ಹೆದ್ದಾರಿ,ವಿ.ವಿ ರಸ್ತೆ,ಗುತ್ತಲು ರಸ್ತೆ, ಡಾ.ಬಿ. ಆರ್ ಅಂಬೇಡ್ಕರ್ ರಸ್ತೆ,ಆರ್‌, ಪಿ ರಸ್ತೆ, ವಿನೋಬಾ ರಸ್ತೆ, ಕೆ ಆರ್ ರಸ್ತೆ,ವಿವೇಕಾನಂದ ರಸ್ತೆ ಗಳಲ್ಲಿ ಬಂದ್ ವಾತಾವರಣ ಕಂಡು ಬಂದಿತು.

ನಾಲ್ಕನೇ ಶನಿವಾರ ಅಂಗವಾಗಿ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಬ್ಯಾಂಕ್ ಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಸಾರ್ವಜನಿಕರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದ್ದರೆ, ಪ್ರತಿಭಟನಾಕಾರರು ಸಹ ಅತ್ತ ಸುಳಿಯಲಿಲ್ಲ,

ನ್ಯಾಯಾಲಯ ಎಂದಿನಂತೆ ಕಾರ್ಯ ಕಲಾಪ ಆರಂಭಿಸಿತ್ತಾದರೂ ವಕೀಲರು ಕಾರ್ಯಕಲಾಪ ಬಹಿಷ್ಕರಿಸಿದರು. ಕಾವೇರಿ ಹೋರಾಟದ ಮಂಡ್ಯ ಬಂದ್ ಗೆ ಜನಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.NDA ಜೊತೆ JDS ಮೈತ್ರಿ ಅಧಿಕೃತ : ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ

ಮಂಡ್ಯ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಹೆಚ್ಚಾಗಿತ್ತು,ಪ್ರಮುಖ ಆಯಾ ಕಟ್ಟಿನಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!