ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್ ಆಸ್ಪತ್ರೆ ರಸ್ತೆಯಲ್ಲಿ ನಡೆದಿದೆ.
ಜಿ. ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್ (28) ಮೃತಪಟ್ಟ ದುರ್ದೈವಿಯಾಗಿದ್ದು, ಈತನ ಇನ್ನಿಬ್ಬರು ಸ್ನೇಹಿತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಕಾರ್ತಿಕ್‌ನ ಹುಟ್ಟುಹಬ್ಬ ಇದ್ದ ಕಾರಣ ಮಾರುತಿ ಕಾರಿನಲ್ಲಿ ತನ್ನಿಬ್ಬರು ಸ್ನೇಹಿತರೊಂದಿಗೆ ನಗರಕ್ಕೆ ಬಟ್ಟೆ ಖರೀದಿಸಲು ಬಂದಿದ್ದು , ಮಳೆ ಪ್ರಾರಂಭವಾದ ಕಾರಣ ರಸ್ತೆ ಬದಿಯ ಮರದ ಕೆಳಗೆ ಕಾರನ್ನು ನಿಲ್ಲಿಸಿದ್ದಾರೆ.
ಬಿರುಗಾಳಿ ಮಳೆಗೆ ಮರ ಕಾರಿನ ಮಧ್ಯ ಭಾಗಕ್ಕೆ ಬಿದ್ದಿದ್ದು , ಹಿಂದೆ ಕುಳಿತಿದ್ದ ಕಾರ್ತೀಕ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು
ಮುಂದೆ ಕುಳಿತಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು , ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಕಾರಿನೊಳಗಿದ್ದ ಕಾರ್ತೀಕ್‌ನ ಶವವನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ