ಸ್ಥಳ ಪರಿಶೀಲನೆ ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ನಂತರ ಬಸರಾಳು ಹೋಬಳಿ ಶಿವಪುರ ಗ್ರಾಮದಲ್ಲಿ ಪೌತಿಖಾತೆ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಪೌತಿ ಖಾತೆಯಾಗದಿರುವ ಬಗ್ಗೆ ಕಂಡುಬಂದಿದ್ದು ರೈತರಿಗೆ ಅನುಕೂಲ ವಾಗುವಂತೆ ಆಂದೋಲನ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.
ವಿಧವಾ ವೇತನ, ಇತರ ಯೋಜನೆಗಳ ಲಾಭ ಪಡೆಯುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು ಹಾಗೂ ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿ ಸ್ವೀಕರಿಸಿದರು.
ಜಿ.ಪಂ.ಸಿಇಒ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ಸರ್ಕಾರಿ ಆಸ್ತಿಗಳಿಗೆ ಈ ಸ್ವತ್ತು ಮಾಡಲು ಕ್ರಮ ವಹಿಸಲು ಜೊತೆಗೆ ಈ ಸ್ವತ್ತು ಸರ್ವೇ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸ್ವಚ್ಚತೆ ಕಾಪಾಡಿಕೊಳ್ಳಲು ಸೂಚನೆ ನೀಡಿದರು.ನಾನು JDS ಪಕ್ಷದಲ್ಲೇ ಇರುತ್ತೇನೆ: ಸಿ.ಎಸ್.ಪುಟ್ಟರಾಜು
ಇದೇ ಸಂದರ್ಭದಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಅಧಿಕಾರಿಗಳು ಇದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು