ನಾಗಮಂಗಲಕ್ಕೆ ಭೇಟಿ ನೀಡಿದ ಮಂಡ್ಯ ಸಂಸದ ಕುಮಾರಸ್ವಾಮಿ

Team Newsnap
1 Min Read

ಮಂಡ್ಯ : ಇಂದು ಬೆಳಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿದ್ದಾರೆ.

ಹೆಚ್‌ಡಿಕೆ ,ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿ ಮಾಲೀಕರ ಅಳಲು ಆಲಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಘಟನೆ ನಡೆದ ಬುಧವಾರ ( 11-09-2024) ರಾತ್ರಿಯೇ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ನಾಗಮಂಗಲ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಶೀಘ್ರವೇ ಭಾರತದಲ್ಲಿ ಏರ್ ಟ್ಯಾಕ್ಸಿಗಳ ಸಂಚಾರ ಆರಂಭ : ನರೇಂದ್ರ ಮೋದಿ

ನಾನು ಉಗ್ರವಾ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್‌ಡಿಕೆಯೊಂದಿಗೆ ಮಾಜಿ ಶಾಸಕರಾದ ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಸಾಥ್ ನೀಡಿದ್ದಾರೆ.

Share This Article
Leave a comment