ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ, ಡಿಸೆಂಬರ್ 3, 2024 (ಮಂಗಳವಾರ) ರಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (2ನೇ ಪಿಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಈ ನಿರ್ಣಯ ಕೈಗೊಂಡಿದ್ದು, ರಜೆ ಸರ್ಕಾರಿ, ಖಾಸಗಿ, ಹಾಗೂ ಅನುದಾನಿತ ಶಾಲೆಗಳಿಗೆ ಅನ್ವಯವಾಗುತ್ತದೆ. ಮೈಸೂರು ಜಿಲ್ಲೆಯಲ್ಲಿ ಕೂಡ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ಇದಕ್ಕೆ ಅನುಮೋದನೆ ನೀಡಿದ್ದಾರೆ.
ಇದನ್ನು ಓದಿ – ಮಂಡ್ಯ ಎಡಿಸಿ ಸನ್ಯಾಸ ದೀಕ್ಷೆ ಸ್ವೀಕರಿಸಲು ನಿರ್ಧಾರ
ಈ ರಜೆಯ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲು ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು