ಹಣದ ದಾಹಕ್ಕೆ ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿದ ಪ್ರೊಫೆಸರ್ ಗಂಡನನ್ನು ಮಂಡ್ಯದ ಪಶ್ಚಿಮ ಪೋಲೀಸರು ಬಂಧಿಸಿದ್ದಾರೆ.
ವಿ.ವಿ ನಗರ ಬಡಾವಣೆಯ ಎಸ್.ಶೃತಿ (32) ಕೊಲೆಯಾದ ಗೃಹಿಣಿ. ಟಿ.ಎನ್.ಸೋಮಶೇಖರ್(41) ಎಂಬಾತನೇ ಹೆಂಡತಿ ಮಲಗಿದ್ದ ವೇಳೆ ಮುಖಕ್ಕೆ ದಿಂಬು, ಬೆಡ್ ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆ ನಂತರ ಸಹಜ ಸಾವೆಂದು ಬಿಂಬಿಸಿದ್ದ ನಾಟಕವಾಡಿರುವುದು ಬಯಲಾಗಿದೆ.
ತಂದೆ, ತಾಯಿ ಹಾಗೂ ತಂಗಿ ಸಾವಿನ ಬಳಿಕ ಶೃತಿ ಹೆಸರಿಗೆ ಕೋಟ್ಯಾಂತರ ರೂಪಾಯಿ ಆಸ್ತಿ ಬಂದಿದೆ. ಕೆಲ ವರ್ಷಗಳ ಹಿಂದೆ ಮೃತ ಶೃತಿ ತಂದೆ, ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
2018ರಲ್ಲಿ ಶೃತಿ ತಂಗಿ ಸುಶ್ಮಿತ ಕೂಡ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಮೂವರ ಸಾವಿನ ಬಳಿಕ ಶೃತಿ ಹೆಸರಿಗೆ 10 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಬಂದಿದೆ. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಬಿಲ್ಡಿಂಗ್ಸ್, ಮನೆ ಹಾಗೂ ಸೈಟ್‌ಗಳು ಈಕೆಯ ಹೆಸರಿಗೆ ಸೇರಿದೆ.
ಇತ್ತೀಚೆಗೆ ಕೋಟ್ಯಾಂತರ ರೂಪಾಯಿ ಆಸ್ತಿ ಮಾರಲು ಶೃತಿಗೆ ಪತಿ ಸೋಮಶೇಖರ್ ಒತ್ತಾಯಿಸುತ್ತಿದ್ದ.
ಮೈಸೂರಿನ ಆಸ್ತಿ ಮಾರಾಟ ಮಾಡಿ ಬೇರೆಡೆ ಆಸ್ತಿ ಖರೀದಿಗೆ ಪ್ಲಾನ್ ಮಾಡಿದ್ದ. ಆದರೆ ಶೃತಿ ಆಸ್ತಿ ಮಾರಾಟಕ್ಕೆ ನಿರಾಕರಿಸಿದ್ದರು. ಇದೇ ವಿಚಾರಕ್ಕೆ ಹಲವು ಬಾರಿ ಗಂಡ, ಹೆಂಡತಿ ಮಧ್ಯೆ ಜಗಳ ನಡೆದಿದೆ.
ಕಳೆದ ಶನಿವಾರ ಶೃತಿ ಮನೆಯಲ್ಲಿ ಮಲಗಿದ್ದ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಆದರೆ ಪಲ್ಸ್ ರೇಟ್ ಕಮ್ಮಿಯಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದಾನೆ.
ನಂತರ ಮೃತ ಶೃತಿ ಚಿಕ್ಕಪ್ಪನಿಗೆ ಕರೆ ಮಾಡಿ ಸಹಜ ಸಾವೆಂದು ಸೋಮಶೇಖರ್ ತಿಳಿಸಿದ್ದಾನೆ. ಅನುಮಾನಗೊಂಡ ಶೃತಿ ಚಿಕ್ಕಪ್ಪ ಕುಮಾರಸ್ವಾಮಿ ಅನುಮಾನಾಸ್ಪದ ಸಾವೆಂದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ತನಿಖೆ ಆರಂಭಿಸಿದ್ದ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಸಾಯಿಸಿರುವ ಸತ್ಯ ಗೊತ್ತಾಗಿದೆ.
ಶೃತಿ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಪತಿ ಸೋಮಶೇಖರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.ಕರುನಾಡ ಜಿಲ್ಲೆಗಳ ಕಿರು ಪರಿಚಯ – 16- ಶಿವಮೊಗ್ಗ
ವಿಚಾರಣೆ ವೇಳೆ ತಾನೇ ಕೊಲೆ ಮಾಡಿರುವುದಾಗಿ ಸೋಮಶೇಖರ್ ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿ ಪತಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು