ಮಂಡ್ಯ: ಈಜಲು ತೆರಳಿದ್ದ ಇಬ್ಬರು ಬಾಲಕರು ಈಜು ಬಾರದ ಕಾರಣ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕರು ಶಂಕರಪುರ ಗ್ರಾಮದ ಸೋಮು (14) ಮತ್ತು ಮುತ್ತುರಾಜು (17) ಎಂದು ಗುರುತಿಸಲಾಗಿದೆ.
ಐವರು ಸ್ನೇಹಿತರು ಒಟ್ಟಾಗಿ ಕೆರೆಗೆ ಈಜು ಹೊಡೆಯಲು ತೆರಳಿದ್ದು , ಈ ವೇಳೆ ಈಜು ಬಾರದೇ ಸೋಮು ಮತ್ತು ಮುತ್ತುರಾಜು ಮುಳುಗಿ ಸಾವನ್ನಪ್ಪಿದ್ದಾರೆ.
ಮುಳುಗಿದ ಇಬ್ಬರ ಪೈಕಿ ಮುತ್ತುರಾಜು ಮೃತದೇಹವನ್ನು ಪತ್ತೆಹಚ್ಚಲಾಗಿದೆ, ಆದರೆ ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಇನ್ನೂ ಮುಂದುವರಿಯುತ್ತಿದೆ. ಇದನ್ನು ಓದಿ –ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಸ್ತರಣೆ ; ಗುದ್ದಲಿ ಪೂಜೆ ನೆರವೇರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು