- ಮಂಡ್ಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ತಾಕೀತು
ಮಂಡ್ಯ :
ಜಿಲ್ಲೆಯ ಕೊನೆಯ ಭಾಗ ಬೆಳೆಗಳಿಗೆ ನಾಲೆಗಳ ಮೂಲಕ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು. ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಕಚೇರಿ ಸೇರಿದಂತೆ ಕಂದಾಯ ಇಲಾಖೆ ಎಲ್ಲಾ ಕಚೇರಿಗಳಲ್ಲಿ ಭ್ರಷ್ಟಾಚಾರ ವ್ಯವಸ್ಥೆಯನ್ನು ಕೂಡಲೇ ತೊಡೆದು ಹಾಕುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಶನಿವಾರ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು ರಸ್ತೆಗಳ ಅಭಿವೃದ್ದಿಗೆ ಆದ್ಯತೆ ನೀಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಡಿಡಿಪಿಐಗೆ ಸೂಚಿಸಿದರು.
ಈ ಸಭೆಯಲ್ಲಿ ಮಾತನಾಡಿದ ಮಳವಳ್ಳಿ ಶಾಸಕ ಪಿ ಎಂ ನರೇಂದ್ರ ಸ್ವಾಮಿ, ಮುಂಗಾರು ಆರಂಭವಾಗುತ್ತದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕರೆ ನೀಡಿದರು.
ನೀರಾವರಿ., ಶಿಕ್ಷಣ , ರಸ್ತೆ , ಗ್ರಾಮೀಣಾಭಿವೃದ್ದಿ ಇಲಾಖೆಗಳೂ ಸೇರಿದಂತೆ ಇತರ ಇಲಾಖೆಗಳು ಜಿಲ್ಲೆಯ ಅಭಿವೃದ್ದಿಗೆ ಸ್ಪಂದಿಸಬೇಕು. ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಜೆಟ್ ಮೂಲಕ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನ ತರುವ ಪ್ರಯತ್ನಕ್ಕೆ ಅಧಿಕಾರಿಗಳು ಸಹಕಾರ ನೀಡುವಂತೆ ಸಲಹೆ ನೀಡಿದರು.
ನಿಮ್ಮ ನಿಕ್ಷ್ರೀಯತೆ ಇರಬಾರದು. ಕಾರ್ಯಕ್ರಮ ರೂಪಿಸುವ ಕಾರ್ಯಕ್ಷಮತೆ ತೋರಿ, ವಿವಿಧ ಇಲಾಖೆಗಳ ಸಹಕಾರೊಂದಿಗೆ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ, ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆ. ಮುಂಗಾರು ಮಳೆ ಆರಂಭವಾಗಲಿದೆ. ರೈತರಿಗೆ ಅಗತ್ಯವಾಗಿರುವ ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಎಲ್ಲವನ್ನೂ ಶೇಖರಣೆ ಮಾಡಿ ಇಟ್ಟುಕೊಳ್ಳಿ. ಅಲ್ಲದೇ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ತೋರಿ ಎಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ ಮಾತನಾಡಿ ಈ ಹಿಂದಿನ ಸರ್ಕಾರವು ಭ್ರಷ್ಟಾಚಾರ ಮತ್ತು ಶೇ 40 ಲಂಚ ಸ್ವೀಕಾರದ ಆಪಾದನೆಯಿಂದ ಜನರಿಗೆ ತುಂಬಾ ತೊಂದರೆಯಾಯಿತು. ಸರ್ಕಾರಿ ಕಚೇರಿಯಲ್ಲಿ ಜನ ಸಾಮಾನ್ಯರನ್ನು ಶೋಷಣೆ ಮಾಡುವ ಪದ್ದತಿ ನಿಲ್ಲಬೇಕು ಎಂದು ತಾಕೀತು ಮಾಡಿದರು.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರು ಮಾತನಾಡಿ, ಪ್ರತಿ ತಾಲೂಕಿನ ತಹಶೀಲ್ದಾರ್ ಕಚೇರಿಗಳು ಮತ್ತು ಪೋಲಿಸ್ ಠಾಣೆ ಗಳಲ್ಲಿ ಭಾರಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅನೇಕ ವರ್ಷ ಗಳಿಂದ ಅಧಿಕಾರಿಗಳು ಇಲ್ಲೇ ಠಿಕಾಣೆ ಹೊಡೆದಿದ್ದಾರೆ. ಎಲ್ಲರನ್ನೂ ಬದಲಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಎಚ್ ಎನ್ ಗೋಪಾಲಕೃಷ್ಣ ಮಾತನಾಡಿ ಜಿಲ್ಲೆಯ ಸ್ಥಿತಿ ಗತಿ, ಆರ್ಥಿಕ ಕೊರತೆ ಬಗ್ಗೆ ಮಂತ್ರಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
- ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
- ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
- ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ
- ಕರ್ನಾಟಕದಲ್ಲಿ ಮಳೆ ಅಬ್ಬರ: ಒಳನಾಡು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ
- ಟೊಮೆಟೊ ದರದಲ್ಲಿ ಭಾರಿ ಏರಿಕೆ: 1 ಕೆಜಿಗೆ 80 ರೂ.!
More Stories
ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ