ಮಂಗಳೂರಿನ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಚೇರಿ ಮತ್ತು ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ಮಾಡಿದೆ.
ಎಂಟು ಕಡೆಗಳಲ್ಲಿ ಬೆಳಗ್ಗಿನ ಜಾವ ಸುಮಾರು 3:30ರ ವೇಳೆಗೆ ದಾಳಿ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ.
ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ. ಅರೆಮೀಸಲು ಪಡೆಯಿಂದ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ, ಪಿಎಫ್ ಐ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದೆ. ಇದನ್ನು ಓದಿ :ಪಿಎಂ ಕೇರ್ಸ್ ಫಂಡ್: ರತನ್ ಟಾಟಾ ಟ್ರಸ್ಟಿ, ಸಲಹೆಗಾರರಾಗಿ ಸುಧಾಮೂರ್ತಿ ನೇಮಕ
ಸೆ.8 ರಂದು ಎನ್‌ಐಎ ಬಿಹಾರದ ಪ್ರಕರಣವೊಂದರ ಸಲುವಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಅವರ ಬಿ.ಸಿ.ರೋಡ್ ಬಳಿ ಇರುವ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು