ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ದಾಖಲೆಯ 16ನೇ ಬಜೆಟ್ ಮಂಡನೆ ವೇಳೆ, ಸಿಎಂ ಸಿದ್ದರಾಮಯ್ಯ ಈ ಮಹತ್ವದ ಘೋಷಣೆ ಮಾಡಿದ್ದು, ವಿಶ್ವವಿದ್ಯಾಲಯವನ್ನು ದೇಶದ ಮಾದರಿಯಾಗಿ ರೂಪಿಸುವ ಉದ್ದೇಶ ಹೊಂದಿದ್ದಾರೆ. ಈ ಪ್ರಕ್ರಿಯೆಯಡಿಯಲ್ಲಿ, ಸರ್ಕಾರಿ ಕಲಾ ಕಾಲೇಜು ಮತ್ತು ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಿಳಾ ಉನ್ನತ ಶಿಕ್ಷಣದ ಪ್ರೋತ್ಸಾಹ
ಮಹಿಳಾ ಉನ್ನತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ, ಹಿಂದಿನ ವರ್ಷ 31 ಮಹಿಳಾ ಕಾಲೇಜುಗಳನ್ನು ಉನ್ನತೀಕರಿಸುವ ಕ್ರಮ ಕೈಗೊಳ್ಳಲಾಗಿತ್ತು. ಈ ಬಾರಿ ಉಳಿದ 26 ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ 26 ಕೋಟಿ ರೂ. ಅನುದಾನ ನೀಡಲಾಗುವುದು.
ಇದನ್ನು ಓದಿ -ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ – ಸಿಎಂ ಸಿದ್ದರಾಮಯ್ಯ ಘೋಷಣೆ
ಗುಣಮಟ್ಟದ ಉನ್ನತ ಶಿಕ್ಷಣಕ್ಕಾಗಿ 2,500 ಕೋಟಿ ರೂ. ಯೋಜನೆ
ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸಲು, ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನಿಂದ 2,500 ಕೋಟಿ ರೂ. ಯೋಜನೆ ಅನುಷ್ಠಾನಗೊಳಿಸುವ ಯೋಜನೆ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು