24 ನೂತನ ಶಾಸಕರಿಗೆ ಮಂತ್ರಿ ಯೋಗ

Team Newsnap
1 Min Read
Ministerial list announced: CM Siddu upheld regional and social justice ಸಚಿವ ಸಂಪುಟ ಪಟ್ಟಿ ಪ್ರಕಟ : ಪ್ರಾದೇಶಿಕ - ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಸಿಎಂ ಸಿದ್ದು
  • ಮೇ 27 ರಂದು ನೂತನ ಸಚಿವರ ಪ್ರಮಾಣ ವಚನ
  • ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್
  • ಇಂದು ರಾತ್ರಿ – ನಾಳೆ ಬೆಳಗ್ಗೆ ಹೈ ಕಮಾಂಡ್ ಪಟ್ಟಿ ರಿಲೀಸ್

ಬೆಂಗಳೂರು :

ಮೇ 27 ರಂದು 24 ಮಂದಿ ನೂತನ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಕೂಡ ಒಪ್ಪಿಗೆ ನೀಡಿದೆ

ಬೆಂಗಳೂರಿನ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ
ಪ್ರಮಾಣ ವಚನ ಕಾರ್ಯಕ್ರಮ ನಡೆಸಿಕೊಡಲು ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಸರ್ಕಾರದ ಮನವಿ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಯಾರೂ ಕಟ್ಟಬೇಡಿ : ಪ್ರತಾಪ್ ಸಿಂಹ

ಶೀಘ್ರದಲ್ಲೇ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದೆ ಇಂದು ರಾತ್ರಿ ಅಥವಾ ನಾಳೆ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲಿದೆ.

ದೆಹಲಿಯ ಜಿಆರ್ಜಿ ರಸ್ತೆಯ ಕಾಂಗ್ರೆಸ್ ವಾರ್ ರೂಮ್ ನಲ್ಲಿ ನಡೆಯುತ್ತಿದ್ದ ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಸಭೆ ರಾತ್ರಿ ಮುಕ್ತಾಯಗೊಂಡಿದೆ.

ಡಿ.ಕೆ. ಶಿ ಇಂದು ರಾತ್ರಿ 12.45 ರ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಮತ್ತೆ ನಾಳೆ ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ.

ಈ ನಡುವೆ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಪಟ್ಟಿ ಫೈನಲ್ ಮಾಡಲಿದ್ದಾರೆಂದು ಹೇಳಲಾಗಿದೆ.

Share This Article
Leave a comment