ಮಾರಮ್ಮನ ದೇವಾಲಯದಲ್ಲಿ ವಿತರಿಸಿದ್ದ ಪುಳಿಯೋಗರೆ ಸೇವಿಸಿ 70ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ನಡೆದಿದೆ.
ದೇವಾಲಯದಲ್ಲಿ ಅಕ್ಟೋಬರ್ 27ರ ರಾತ್ರಿ ಪ್ರಸಾದದ ರೂಪದಲ್ಲಿ ಪುಳಿಯೋಗರೆಯನ್ನು ದೇವಸ್ಥಾನಕ್ಕೆ ಬಂದಿದ್ದ ಭಕ್ತಾದಿಗಳಿಗೆ ಹಂಚಲಾಗಿತ್ತು. ಈ ಪ್ರಸಾದ ಸೇವಿಸಿದ್ದ ಸುಮಾರು ಎಪ್ಪತ್ತಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸಾದ ಸೇವಿಸಿದ ನಂತರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಅಸ್ವಸ್ಥಗೊಂಡ 70ಕ್ಕೂ ಹೆಚ್ಚು ಜನರನ್ನು ಕೂಡಲೇ ಮಳವಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹಲಗೂರು ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ