November 1, 2024

Newsnap Kannada

The World at your finger tips!

marriage

ಗ್ರಾಮ ಪಂಚಾಯ್ತಿಯಲ್ಲೇ ಮದುವೆ ಸರ್ಟಿಫಿಕೇಟ್: ಸರ್ಕಾರ ಆದೇಶ

Spread the love

ಸ್ಥಳೀಯ ಗ್ರಾಮ ಪಂಚಾಯ್ತಿಯಲ್ಲೇ ಮದುವೆ ಸರ್ಟಿಫಿಕೇಟ್ ಸಿಗಲಿದೆ. ಈ ಸಂಬಂಧ ಇಂದು ಸರ್ಕಾರ ಅಧಿಕೃತ ಆದೇಶವೊಂದನ್ನು ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಸರ್ಕಾರ ವಿವಾಹ ನೊಂದಣಿ ಅಧಿಕಾರವನ್ನು ಪಿಡಿಓಗಳಿಗೆ ಸರ್ಕಾರ ನೀಡಿದೆ.

ಈ ಕಾರಣಕ್ಕಾಗಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಇನ್ನು ಮುಂದೆ ಮದುವೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.
ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ಮದುವೆ ನೋಂದಣಿಗೆ ಅವಕಾಶ ಇತ್ತು. ಮದುವೆ ನಡೆದ ಸ್ಥಳ ಅಥವಾ ಪತಿ-ಪತ್ನಿಯರು ವಾಸಿಸುವ ಸ್ಥಳದ ಅಧಿಕಾರ ವ್ಯಾಪ್ತಿ ಹೊಂದಿರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕಿತ್ತು.

ಅಗತ್ಯವಾದ ಅರ್ಜಿ ನಮೂನೆ ಅದೇ ಕಚೇರಿಯಲ್ಲಿ ದೊರೆಯುತ್ತಿತ್ತು. ಇಲ್ಲವೇ ಅದನ್ನು ಇಂಟರ್ನೆಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿತ್ತು.

ಈ ಅರ್ಜಿಯನ್ನು ಎಚ್ಚರಿಕೆಯಿಂದ ತುಂಬಿ ನಂತರ ಮೂವರು ಸಾಕ್ಷಿಗಳು (ಸ್ನೇಹಿತರು, ಬಂಧುಗಳು) ಸಹಿ ಮಾಡಬೇಕಿತ್ತು. ಈ ಅರ್ಜಿಗೆ ವಧು-ವರ ಕೂಡ ಅಹಿ ಮಾಡಿ, ನಂತರ ಅದಕ್ಕೆ ಮೊಹರು ಹಾಕಿ ರಿಜಿಸ್ಟ್ರಾರ್ ಸಹಿ ಮಾಡುತ್ತಿದ್ದರು. ಆದರೆ ಇನ್ಮುಂದೆ ಗ್ರಾಮ ಪಂಚಾಯತಿ ಪಿಡಿಓಗೆ ಮದುವೆ ನೋಂದಣಿ ಅಧಿಕಾರವನ್ನು ಸರ್ಕಾರ ಕೊಟ್ಟಿದೆ.

Copyright © All rights reserved Newsnap | Newsever by AF themes.
error: Content is protected !!